ಜನ ರಾಜಕೀಯ ಬದಲಾವಣೆಗಾಗಿ ಹೊಸ ನಾಯಕನ ಹುಡುಕಾಟದಲ್ಲಿ ತೊಡಗಿದ್ದಾರೆ : ಗುಂಜೂರು ಎಸ್.ಶ್ರೀನಿವಾಸರೆಡ್ಡಿ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಜನ ರಾಜಕೀಯ ಬದಲಾವಣೆಗಾಗಿ ಹಾತೊರೆಯುತ್ತಿದ್ದಾರೆ. ಕೆಲವು ದಶಕಗಳಿಂದ ಇಲ್ಲಿನ ಆಡಳಿತದ ಚುಕ್ಕಾಣಿ ಹಿಡಿದಿದ್ದ ಇಬ್ಬರು ನಾಯಕರ ಬಗ್ಗೆ ಬೇಸತ್ತಿರುವ ಅವರು ಹೊಸ ನಾಯಕನ ಹುಡುಕಾಟದಲ್ಲಿ ತೊಡಗಿದ್ದಾರೆ ಎಂದು ಮುಖಂಡ ಗುಂಜೂರು ಎಸ್.ಶ್ರೀನಿವಾಸರೆಡ್ಡಿ ಹೇಳಿದರು.
ತಾಲ್ಲೂಕಿನ ಯಲ್ದೂರು ಗ್ರಾಮದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಾರ್ವಜನಿಕ ಸಮಾರಂಭದಲ್ಲಿ ಕೆಲವು ಜೆಡಿಎಸ್ ಬೆಂಬಲಿಗರನ್ನು ತಮ್ಮ ಬಣಕ್ಕೆ ಸೇರಿಸಿಕೊಂಡ ಬಳಿಕ ಮಾತನಾಡಿದ ಅವರು, ‘ಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸಲಿದ್ದು, ಜನರ ಆಶೀರ್ವಾದ ದೊರೆತಲ್ಲಿ ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ’ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಜಶೇಖರರೆಡ್ಡಿ ಮಾತನಾಡಿ, ತಾಲ್ಲೂಕಿನಲ್ಲಿ ಕೆಲವು ದಶಕಗಳಿಂದ ಇಬ್ಬರು ಮಾತ್ರ ವಿಧಾನಸಭೆಗೆ ಆಯ್ಕೆಯಾಗಿ ಬರುತ್ತಿದ್ದಾರೆ. ಆದರೆ ತಾಲ್ಲೂಕಿ ಅಭಿವೃದ್ಧಿ ಕನಸಾಗಿಯೇ ಉಳಿದಿದೆ. ಆದ್ದರಿಂದಲೇ, ಬಡವರ ಪರ ಕಾಳಜಿ ಹೊಂದಿರುವ ಮುಖಂಡ ಗುಂಜೂರು ಆರ್.ಶ್ರೀನಿವಾಸರೆಡ್ಡಿ ಅವರನ್ನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮನವೊಲಿಸಲಾಗಿದೆ. ಬೇರೆ ಬೇರೆ ಪಕ್ಷದ ಕಾರ್ಯಕರ್ತರು ಗುಂಜೂರು ಶ್ರೀನಿವಾಸರೆಡ್ಡಿ ಅವರ ಮೇಲೆ ವಿಶ್ವಾಸ ಇಟ್ಟು ಹೆಗಲು ಕೊಡುತ್ತಿದ್ದಾರೆ ಎಂದು ಹೇಳಿದರು.
ಪುರಸಭೆಯ ಮಾಜಿ ಅಧ್ಯಕ್ಷ ಬಿ.ಎಂ.ಪ್ರಕಾಶ್ ಮಾತನಾಡಿ, ದಶಕಗಳಿಂದ ತಾಲ್ಲೂಕಿನ ರಾಜಕೀಯ ಚುಕ್ಕಾಣಿ ಹಿಡಿದಿರುವ ಇಬ್ಬರು ಪ್ರಬಲ ಮುಖಂಡರು ಬೇರೆಯವರು ರಾಜಕೀಯವಾಗಿ ಬೆಲೆಯಲು ಅವಕಾಶ ಮಾಡಿಕೊಟ್ಟಿಲ್ಲ. ಹಾಗಾಗಿ ಎರಡೂ ಕಡೆ ಎರಡನೇ ಸಾಲಿನ ನಾಯಕರ ಕೊರತೆ ಕಂಡುಬರುತ್ತದೆ. ಆದರೆ ಗುಂಜೂರು ಆರ್.ಶ್ರೀನಿವಾಸರೆಡ್ಡಿ ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆ ಇರುವ ವ್ಯಕ್ತಿಯಾಗಿದ್ದಾರೆ. ಹಾಗಾಗಿ ಜನರು ನಾಯಕತ್ವದ ಬದಲಾವಣೆ ಬಯಸುತ್ತಿದ್ದಾರೆ ಎಂದು ಹೇಳಿದರು.
ಮುತ್ತಕಪಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹನುಮಂತರೆಡ್ಡಿ, ಯಲ್ದೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮುನಿಯಪ್ಪ, ಉಪಾಧ್ಯಕ್ಷ ಆನಂದ್ ಸೇರಿದಂತೆ ಹಲವರು ಜೆಡಿಎಸ್ ತೊರೆದು ಗುಂಜೂರು ಶ್ರೀನಿವಾಸರೆಡ್ಡಿ ಬಣ ಸೇರಿದರು.
ಸ್ಥಳೀಯ ಮುಖಂಡರಾದ ಹನುಮಂತರೆಡ್ಡಿ, ಸಮೀವುಲ್ಲಾ, ಶಿವಣ್ಣ, ಮಹಮದ್ ಅಲಿ, ಸುಬ್ರಮಣಿ ಇದ್ದರು.