ಶ್ರೀನಿವಾಸಪುರ: ಗ್ರಾಮೀಣ ಪ್ರದೇಶದ ಜನರು ಜನಸ್ಪಂದನ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು. ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮ ಬಸವಂತಪ್ಪ ಹೇಳಿದರು.
ತಾಲ್ಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಬುಧವಾರ ಏರ್ಪಡಿಸಿದ್ದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲ್ಲೂಕು ಕೇಂದ್ರದ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವ ಉದ್ದೇಶದಿಂದ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ರಾಯಲ್ಪಾಡ್ ಹೋಬಳಿ ವ್ಯಾಪ್ತಿಯ 8 ಗ್ರಾಮಗಳ ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಒಳಗೊಂಡ ಅರ್ಜಿ ನೀಡಿದರು. ವಿವಿಧ ಇಲಾಖೆ ಅಧಿಕಾರಿಗಳು ಆಯಾ ಇಲಾಖೆಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಿವಕುಮಾರಿ, ಸಹಾಯಕ ನಿರ್ದೇಶಕ ರಾಮಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರೆಡ್ಡಮ್ಮ, ನೇತ್ರಾವತಿ, ಲಕ್ಷ್ಮಿದೇವಮ್ಮ, ಮಂಜುಳ, ಉಪಾಧ್ಯಕ್ಷೆ ವೆಂಕಟಲಕ್ಷ್ಮಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಲಕ್ಷ್ಮಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್, ತೋಟಗಾರಿಕೆ ಸಹಾಯಕ ನಿರ್ದೇಶಕ ಎ.ಬೈರಾರೆಡ್ಡಿ, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಪ್ಪ, ಬೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಮತೀರ್ಥ, ಡಿ.ಎಂ.ನಾರಾಯಣಸ್ವಾಮಿ, ಸಿ.ಸುಲೋಚನ, ಅಬೀಬುಲ್ಲಾ, ಮಂಜುನಾಥ್, ನಟೇಶ್, ಪಿಡಿಒ ಗೌಸ್ಸಾಬ್ ಇದ್ದರು.