ಜನರು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು :ಆರೋಗ್ಯ ಇಲಾಖೆಯ ಸಂಪನ್ಮೂಲ ವ್ಯಕ್ತಿ ದೀಪ

ಶ್ರೀನಿವಾಸಪುರ: ಜನರು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಸಂಪನ್ಮೂಲ ವ್ಯಕ್ತಿ ದೀಪ ಹೇಳಿದರು.
ತಾಲ್ಲೂಕಿನ ಹೊದಲಿ ಗ್ರಾಮದಲ್ಲಿ ಶನಿವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆರೋಗ್ಯ ಅರಿವು ಕಾರ್ಯಕ್ರಮದಡಿ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿ, ಜನರು ಆರೋಗ್ಯವೇ ಭಾಗ್ಯ ಎಂಬ ಮಾತಿನಲ್ಲಿ ನಂಬಿಕೆ ಇಡಬೇಕು. ಆರೋಗ್ಯ ಕೆಟ್ಟರೆ ಸರಿಪಡಿಸಿಕೊಳ್ಳುವುದು ಕಷ್ಟ. ಹಾಗಾಗಿ ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ, ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸುವುದು ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.
ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಅರೋಗ್ಯ ಕುರಿತು ಅರಿವು ಮೂಡಿಸಲಾಯಿತು. ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಬಗ್ಗೆ ಮಾಹಿತಿ ನೀಡಲಾಯಿತು. ಗ್ರಾಮಸ್ಥರಿಗೆ ರಕ್ತದೊತ್ತಡ ಮತ್ತು ಸಕ್ಕೆರೆ ಕಾಯಿಲೆ ತಪಾಸಣೆ ನಡೆಸಲಾಯಿತು.
ಜ್ಞಾನ ವಿಕಾಸ ಸಮನ್ವಯಾಧಿಕಾರಿ ಈರಮ್ಮ ನಾಗರಾಳ, ಕಾರ್ಯಕರ್ತೆ ಸವಿತಾ, ಪ್ರತಿನಿಧಿ ಸುಗುಣಮ್ಮ ಇದ್ದರು