ಚಾಮರಾಜನಗರ : ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಇಂಡಿಗನತ್ನ ಗ್ರಾಮದಲ್ಲಿ ಮತದಾನ ಮಾಡುವ ವಿಚಾರಕ್ಕೆ
ಅಧಿಕಾರಿಗಳು ಮತ್ತು ಗ್ರಾಮಸ್ಥರ ನಡುವೆ ಗಲಾಚೆಯಾಗಿದೆ ಮತಗಟ್ಟೆಯೇ ಧ್ವಂಸಗೊಂಡ ಅಹಿತಕರ ಘಟನೆ ಸಂಭವಿಸಿದೆ.
ಮೂಲಸೌಕರ್ಯ ಒದಗಿಸುವವರೆಗೆ ಮತದಾನ ಮಾಡುವುದಿಲ್ಲ ಎಂದಿದ್ದರೂ ಕೆಲ ಗ್ರಾಮಸ್ಥರನ್ನು ಮತದಾನಕ್ಕೆ ಕರೆತಂದಿದ್ದು ಇದರಿಂದ
ರೊಚ್ಚಿಗೆದ್ದ ಗ್ರಾಮಸ್ಥರು ಮತಕೇಂದ್ರದ ಮೇಲೆ ದಾಳಿ ಮಾಡಿದ್ದಾರೆ.
ಹಾಡಿಯ ಜನರನ್ನು ಮನವೊಲಿಸಿ ಕರೆತಂದು ಮತದಾನ ಮಾಡಿಸಲು ಅಧಿಕಾರಿಗಳು ಮತಗಟ್ಟೆಗೆ ಕರೆದುಕೊಂಡು ಬಂದಿದ್ದರು.
ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಇಂಡಿಗನತ್ತ ಗ್ರಾಮದ ಮತಗಟ್ಟಿಯನ್ನು ಸುತ್ತುವರಿದು ಮೂಲಸೌಕರ್ಯ ಕಲ್ಪಿಸುವವರಗೆ ಮತದಾನ
ಮಾಡಬೇಡಿ ಎಂದು ಗ್ರಾಮಸ್ಸರು ಹಿಡಿದಿದ್ದಾರೆ. ಇದರಿಂದ ಪೊಲೀಸರು ಜನರನ್ನು ಚದುರಿಸಲು ಲಾಠಿಚಾರ್ಜ್ ಮಾಡಿದ್ದಾರೆ. ಈ
ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಮತಗಟ್ಟೆ ಮೇಲೆ ದಾಳಿ ಮಾಡಿದ್ದು ಮೇಜು, ಕುರ್ಚಿ, ಇವಿಎಂ ದ್ವಂಸಮಾಡಿದ್ದಾರೆ.