

ಕೆ.ಜಿ.ಎಫ್., ಜೂ. 17 : ಭಾರತರತ್ನ ಡಾ|| ಬಿ.ಆರ್.ಅಂಬೇಡ್ಕರ್ ಶಿಕ್ಷಣ ಮತ್ತು ಕಲ್ಯಾಣ ಸಂಘದ ವತಿಯಿಂದ ಕರ್ನಾಟಕ ರಾಜ್ಯದ ನೂತನ ಗೃಹ ಸಚಿವ ಡಾ|| ಜಿ.ಪರಮೇಶ್ವರ್ ಅವರಿಗೆ ಜನಮೆಚ್ಚಿದ ಜನನಾಯಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಗೃಹ ಸಚಿವರ ಗೃಹ ಕಛೇರಿಯಲ್ಲಿ ಸಂಘದ ಗೌರವಾಧ್ಯಕ್ಷ ಡಾ|| ಪೂರ್ಣೇಶನ್ರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ರಾಜ್ಯಾಧ್ಯಕ್ಷ ಜೆ.ರಾಜೇಶ್, ಪ್ರಧಾನ ಕಾರ್ಯದರ್ಶಿ ಡಾ|| ಆರ್.ಪ್ರಭುರಾಂ, ಖಜಾಂಚಿ ಜೀವನದಿಯರಾಜೇಶ್ ಅವರುಗಳು ಉಪಸ್ಥಿತರಿದ್ದರು. ನಿವೃತ್ತ ಐಎಎಸ್ ಡಾ|| ತಂಗರಾಜ್ ಅವರು ಮುಖ್ಯ ಅತಿಥಿಗಳಾಗಿದ್ದರು.
ಗೃಹ ಸಚಿವ ಡಾ|| ಜಿ.ಪರಮೇಶ್ವರ್ ಅವರು ಈ ಹಿಂದೆಯೂ ಸಹ ಹಲವು ಬಾರಿ ಸಚಿವರಾಗಿದ್ದು, ಜನಾನುರಾಗಿಯಾಗಿ ಉತ್ತಮ ಹೆಸರು ಗಳಿಸಿದ್ದರು. ಜನಮೆಚ್ಚಿನ ಜನನಾಯಕರಾಗಿ ಹೊರಹೊಮ್ಮಿರುವ ಪರಮೇಶ್ವರ್ ಅವರನ್ನು ಭಾರತರತ್ನ ಡಾ|| ಬಿ.ಆರ್.ಅಂಬೇಡ್ಕರ್ ಶಿಕ್ಷಣ ಮತ್ತು ಕಲ್ಯಾಣ ಸಂಘದ ವತಿಯಿಂದ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿ, ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಭಾರತರತ್ನ ಡಾ|| ಬಿ.ಆರ್.ಅಂಬೇಡ್ಕರ್ ಶಿಕ್ಷಣ ಮತ್ತು ಕಲ್ಯಾಣ ಸಂಘದ ಪದಾಧಿಕಾರಿಗಳು, ಹಲವು ಮುಖಂಡರುಗಳು ಭಾಗವಹಿಸಿದ್ದರು.
