

ಕುಂದಾಪುರ: ಪುಣೆಯಿಂದ ಕುಂದಾಪುರಕ್ಕೆ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸಿದ್ದಾಪುರದ ಪ್ರಶಾಂತ್ ಶೆಟ್ಟಿ (50) ಅವರು ಹೊನ್ನಾವರ ಮಾರ್ಗ ಮಧ್ಯೆ ಮೇ 1ರ ಬೆಳಗಿನ ಜಾವದಲ್ಲಿ ಹೃದಯಾಘಾತದಿಂದ ನಿಧನರಾದರು.
ಬಸ್ಸು ಹೊನ್ನಾವರದ ಹತ್ತಿರ ಬರುತ್ತಿದ್ದಂತೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು, ಕೂಡಲೆ ಬಸ್ ನಿರ್ವಾಹಕರಿಗೆ ಮಾಹಿತಿ ನೀಡಿದರು. ನಿರ್ವಾಹಕ ಕೂಡಲೇ ಅವರನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದರು.ಆದರೆ ಅವರು ಚಿಕಿತ್ಸೆಗೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಹಲವು ವರ್ಷಗಳ ಕಾಲ ಪುಣೆಯಲ್ಲಿ ಹೊಟೇಲ್ ಉದ್ಯಮ ನಡೆಸಿಕೊಂಡು ಬಂದಿದ್ದರು.ಸಮಾಜ ಸೇವೆಯಲ್ಲಿ ಸಕ್ರೀಯರಾಗಿದ್ದ ಅವರು ಕುಂದಾಪುರ ಯುವ ಬಂಟ್ಸ್ ಸಂಘ ಹಾಗೂ ಸಿದ್ದಾಪುರ ಯಕ್ಷ ನುಡಿಸಿರಿ ಬಳಗದಲ್ಲಿ ಸೇವೆ ಸಲ್ಲಿಸುತ್ತಿದ್ದರು.