

ಕುಂದಾಪುರ : ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಡಿಸೆಂಬರ್ 2ರಿಂದ 5ರ ತನಕ ನಡೆಯಲಿರುವ ಬ್ರಹತ್ ಶೈಕ್ಷಣಿಕ ಮಾಹಿತಿ ಮತ್ತು ವಸ್ತು ಪ್ರದರ್ಶನದ ಬಗ್ಗೆ ಪೂರ್ವಭಾವಿ ಸಭೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರ ಅಧ್ಯಕ್ಷತೆಯಲ್ಲಿ ಕುಂದಾಪುರದ ತಾಲೂಕು ಪಂಚಾಯತ್ ಸಬಾಂಗಣದಲ್ಲಿ ನಡೆಯಿತು.
ಕುಂದಾಪುರ –ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ಞಾನ ಶೈಕ್ಷಣಿಕ ಮಾಹಿತಿ , ವಸ್ತು ಪ್ರದರ್ಶನ, ವೃತ್ತಿ ಮಾರ್ಗದರ್ಶನ ನೀಡಲು ನಿರ್ಧರಿಸಲಾಗಿದ್ದು, ಸರ್ವ ಸರಕಾರಿ ಇಲಾಖೆಗಳ ಸಹಕಾರವನ್ನು ಅಪೇಕ್ಷಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಬಹಳಷ್ಟು ವಿಷಯಗಳ ಬಗ್ಗೆ ಮಾಹಿತಿಗಳ ಕೊರತೆ ಇದ್ದು, ಅವರ ಭವಿಷ್ಯದ ದೃಷ್ಟಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲಾ ಇಲಾಖೆಗಳ ಅಧಿಕಾರಿಗಳು ಈ ಶೈಕ್ಷಣಿಕ ವಸ್ತು ಪ್ರದರ್ಶನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.
ತಹಶೀಲ್ದಾರ್ ಶೋಬಾಲಕ್ಷ್ಮಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ.ರವಿಕುಮಾರ್, ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಆರೋಗ್ಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶುಸಂಗೋಪನೆ ಇಲಾಖೆ, ಅರಣ್ಯ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಕಂದಾಯ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಆರೋಗ್ಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶುಸಂಗೋಪನೆ ಇಲಾಖೆ, ಅರಣ್ಯ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಕಂದಾಯ ಇಲಾಖೆಗಳ ಅಧಿಕಾರಿಗಳು ಸಲಹೆ ಸೂಚನೆ ನೀಡಿದರು. ಅಗತ್ಯವುಳ್ಳ ಇಲಾಖೆಗಳ ವಸ್ತು ಪ್ರದರ್ಶನ ಏರ್ಪಡಿಸುವ ನಿರ್ಧಾರ ಕೈಗೊಳ್ಳಲಾಯಿತು.
ಭಂಡಾರ್ಕಾರ್ಸ್ ಕಾಲೇಜಿನ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ರಸಾಯನಶಾಸ್ತ್ರ, ಕಂಪ್ಯೂಟರ್ ವಿಜ್ಞಾನ, ಪತ್ರಿಕೋದ್ಯಮ, ಇತಿಹಾಸ, ವಾಣಿಜ್ಯ ವ್ಯವಹಾರ, ಜನಪದ ಕಲೆ, ಕುಂಚಕಲೆ, ಕ್ರೀಡೆ, ಗ್ರಮಥಾಲಯ, ಸಮುದಾಯ ಬಾನುಲಿ ವಿಷಯಗಳ ಮಾಹಿತಿ ಮತ್ತು ವಸ್ತುಪ್ರದರ್ಶನ ನಡೆಸಲು ನಿರ್ಧರಿಸಲಾಗಿದೆ ಎಂದು ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ರಾಜೇಂದ್ರ ತೋಳಾರ್, ಹಾಗೂ ಯು.ಎಸ್ ಶೆಣೈ ಮಾಹಿತಿ ನೀಡಿದರು.
ಸಾರ್ವಜನಿಕ ವಲಯದಲ್ಲಿರುವ ಬ್ಯಾಂಕ್ ಗಳು, ವಾಣಿಜ್ಯ, ಕೈಗಾಋಇಕೆ, ಕುಶಲ ಕಲೆ ಮುಂತಾದ ವಿಷಯಗಳ ಕುರಿತು ಮಳಿಗೆಗಳನ್ನು ತೆರೆಯಲು ಅವಕಾಶವಿದೆ ಎಂದು ತಿಳಿಸಲಾಯಿತು.
ಕಾಲೇಜಿನ ವ್ಯವಸ್ಥಾಪಕ ಗೋಪಾಲ ನಾಯ್ಕ ವಂದಿಸಿದರು.
