

ಶ್ರೀನಿವಾಸಪುರ ಫೆ-23, ಮಾರ್ಚ್-7 ರ ರಾಜ್ಯ ಬಜೆಟ್ನಲ್ಲಿ ಮಾವು ಬೆಳೆಗಾರರ ಸಮಸ್ಯ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಿ ಮಾವಿನ ಹಣ್ಣಿಗೆ ಸೂಕ್ತ ಮಾರುಕಟ್ಟೆ ಒದಗಿಸಲು ಹಾಗೂ ಮಾವು ಸಂಸ್ಕರಣ ಘಟಕ ಸ್ಥಾಪಿಸಲು 300 ಕೋಟಿ ಅನುದಾನವನ್ನು ಮೀಸಲಿಡಬೇಕೆಂದು ರೈತ ಸಂಘದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ ಪತ್ರಿಕಾ ಹೇಳಿಕೆ ಮುಖಾಂತರ ಮಾನ್ಯ ಮುಖ್ಯ ಮಂತ್ರಿಗಳನ್ನು ಒತ್ತಾಯಿಸಿದರು.
ನಗರದ ಪುರಸಭೆ ಆವರಣದಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ರವರು ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಕೋಲಾರ ಜಿಲ್ಲೆಯನ್ನು ಪ್ರತಿ ಬಜೆಟ್ನಲ್ಲೂ ನಿರ್ಲಕ್ಷೆ ಮಾಡುತ್ತಿರುವ ಸರ್ಕಾರಗಳ ಮೇಲೆ ಒತ್ತಡ ಹಾಕುವಲ್ಲಿ ಸ್ಥಳೀಯ ಜನ ಪ್ರತಿನಿಧಿಗಳು ವಿಫಲವಾಗಿದ್ದಾರೆಂದು ಆರೋಪ ಮಾಡಿದರು.
ಇಡೀ ದೇಶ ವಿದೇಶಗಳಿಗೆ ಮಾವನ್ನು ನೀಡುವ ಮಾವು ಬೆಳೆಗಾರರ ಸಮಸ್ಯೆಗಳನ್ನು ಗಂಭೀರವಾಗಿ ಸರ್ಕಾರ ಪರಿಗಣಿಸುವಲ್ಲಿ ವಿಫಲವಾಗಿದೆ. ಬೆಲೆ ಕುಸಿತ ರೋಗ, ಮತ್ತಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ಜೊತೆಗೆ ಬೆಲೆ ಕುಸಿತವಾದಾಗ ಮಾವನ್ನು ಸಂರಕ್ಷಣೆ ಮಾಡಲು ಸಂಸ್ಕರಣ ಘಟಕಗಳಿಲ್ಲದೆ, ಮಾವನ್ನು ರಸ್ತೆಗಳಲ್ಲಿ ಸುರಿಯಬೇಕಾದ ಪರಿಸ್ಥಿತಿ ಇದ್ದರೂ ಸಮಸ್ಯೆಯನ್ನು ಗಂಭೀರವಾಗಿ ಸರ್ಕಾರ ಪರಿಗಣಿಸಿ ಶಾಶ್ವತ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ಆಕ್ರೋಷ ವ್ಯಕ್ತಪಡಿಸಿದರು.
ತಾಲ್ಲೂಕು ಅಧ್ಯಕ್ಷರಾದ ತೆರ್ನಹಳ್ಳಿ ಆಂಜಿನಪ್ಪ ಮಾತನಾಡಿ ಕೋಟ್ಯಾಂತರ ರೂಪಾಯಿ ವ್ಯವಹಾರ ನಡೆಯುವ ಮಾವು ಮಾರುಕಟ್ಟೆಗೆ ಸೂಕ್ತವಾದ ಜಾಗವಿಲ್ಲ. ಸಿ.ಸಿ. ಕ್ಯಾಮರಗಳಿಲ್ಲ. ಮೂಲಭೂತ ಸೌಕರ್ಯಗಳಿಲ್ಲದೆ, ಬದುಕುಕಟ್ಟಿಕೊಳ್ಳಲು ಬರುವ ಕಾರ್ಮಿಕರು, ರೈತರು, ವ್ಯಾಪಾರಸ್ಥರು ಆರೋಗ್ಯವಾಗಿ ಬಂದು ಅನಾರೋಗ್ಯ ಪೀಡಿತರಾಗಬೇಕಾದ ಮಟ್ಟಕ್ಕೆ ಮಾರುಕಟ್ಟೆ ಹದಗೆಟ್ಟಿದ್ದರೂ ಸರಿಪಡಿಸದ ತಾಲ್ಲೂಕು ಆಡಳಿತ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.
ಮಾವು ಬೆಲೆ ಕುಸಿತವಾದಾಗ ಪಸಲನ್ನು ಸಂರಕ್ಷಣೆ ಮಾಡಲು ಮಾವು ಸಂಸ್ಕರಣ ಘಟಕಗಳ ಸ್ಥಾಪನೆಗೆ ಹಾಗೂ ಮಾರುಕಟ್ಟೆಯ ಅಭಿವೃದ್ದಿಗಾಗಿ ರಾಜ್ಯ ಬಜೆಟ್ನಲ್ಲಿ 300 ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ಮಾವು ಬೆಳೆಗಾರರ ರಕ್ಷಣೆ ಮಾಡಬೇಕೆಂದು ಒತ್ತಾಯಿಸಿದರು.
ಪತ್ರಿಕಾ ಹೇಳಿಕೆ ನೀಡುವಾಗ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಆಲವಾಟಿ ಶಿವು, ರಾಜೇಂದ್ರಗೌಡ, ಹೆಬ್ಬಣಿ ಆನಂದರೆಡ್ಡಿ, ಯಲ್ಲಣ್ಣ, ಮಂಗಸಂದ್ರ ತಿಮ್ಮಣ್ಣ, ಗಿರೀಶ್, ಪುತೇರಿ ರಾಜು, ಮುಂತಾದವರು ಇದ್ದರು.