ತಾಲ್ಲೂಕಿನಲ್ಲಿ ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗಿದೆ ; ಶಾಸಕ ಕೆ.ಆರ್.ರಮೇಶ್ ಕುಮಾರ್

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗಿದೆಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ತಾಲ್ಲೂಕಿನ ಗುಮ್ಮರೆಡ್ಡಿಪುರ ಗ್ರಾಮದಲ್ಲಿ ಗುರುವಾರ ಐ ಮಾಸ್ ದೀಪ ಸ್ಥಾಪನೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸಬೇಕು. ಸಮಸ್ಯೆ ಇದ್ದಲ್ಲಿ ಮುಂಚಿತವಾಗಿಯೇ ಅಗತ್ಯ ಕ್ರಮ ಕೈಗೊಂಡು ಪರಿಹಾರ .
ಗ್ರಾಮದಲ್ಲಿ ಶಾಸಕರ ನಿಧಿಯಿಂದ ರೂ.5 ಲಕ್ಷ ವೆಚ್ಚದಲ್ಲಿ ಐ ಮಾಸ್ ದೀಪ ಸ್ಥಾಪನೆ ಮಾಡಲಾಗುತ್ತಿದೆ. ಗ್ರಾಮಕ್ಕೆ ಅಗತ್ಯವಾದ ಎಲ್ಲ ಸೌಕರ್ಯ ಕಲ್ಪಿಸಲಾಗುವುದು. ನಾಗರಿಕರು ಸ್ವಚ್ಛತೆ ಹಾಗೂ ಶುದ್ಧ ಕುಡಿಯುವ ನೀರು ಸೇವನೆಗೆ ಮೊದಲ ಅದ್ಯತೆ ನೀಡಬೇಕು. ಈ ಉದ್ದೇಶದಿಂದಲೇ ಸಾಕಷ್ಟು ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಘಟಕಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.
ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಮುಖಂಡರಾದ ಮುನಿಶಾಮಿ ನಾಯಕ್, ಕೆ.ಕೆ.ಮಂಜುನಾಥರೆಡ್ಡಿ, ವಾಸುದೇವರೆಡ್ಡಿ ಇದ್ದರು.