ಕೋಲಾರ:- ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಇತ್ತೀಚೆಗೆ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜಯ ಸಾಧಿಸಿರುವ ಸಂಸದೆ ಪ್ರಿಯಾಂಕ ಗಾಂಧಿ ವಾದ್ರಾ ಅವರನ್ನು ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಿಯಾಂಕ ಗಾಂಧಿಯವರ ಗೆಲುವಿನಿಂದ ಕಾಂಗ್ರೆಸ್ ಪಕ್ಷದ ಶಕ್ತಿ ಇಮ್ಮಡಿಯಾಗಿದೆ, ರಾಹುಲ್ ಗಾಂಧಿಯವರೊಂದಿಗೆ ಪ್ರಿಯಾಂಕ ಗಾಂಧಿಯವರೂ ಲೋಕಸಭೆ ಪ್ರವೇಶಿಸಿರುವುದರಿಂದ ಕೇಂದ್ರ ಸರ್ಕಾರದ ಜನವಿರೋಧಿ ನಿಲುವುಗಳ ವಿರುದ್ದ ಹೋರಾಟ ನಡೆಸಲು ಬಲ ಬಂದಿದೆ ಎಂದು ಅಭಿಪ್ರಾಯಪಟ್ಟರು.
ಮುಂದಿನ ಲೋಕಸಭಾ ಹಾಗೂ ಬರುವ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಶಕ್ತಿ ತುಂಬುವ ಕೆಲಸವನ್ನು ಪ್ರಿಯಾಂಕ ಗಾಂಧಿಯವರು ಮಾಡಲಿ ಎಂದು ಶುಭ ಹಾರೈಸಿದರು.