ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಕೋಲಾರ:- ಜೀವನದಲ್ಲಿ ಕೌಶಲ್ಯವಿದ್ದಲ್ಲಿ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಬಹುದು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಸಂಘಟನಾ ಆಯುಕ್ತ ವಿ.ಬಾಬು ಅವರು ಅಭಿಪ್ರಾಯಿಸಿದರು.
ನಗರದ ಅಂತರಗAಗೆ ರಸ್ತೆಯಲ್ಲಿರುವ ವಿವೇಕ್ ಇನ್ಫೋಟೆಕ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ ಕೌಶಲ್ಯ ಅಭಿವೃದ್ಧಿ ತರಬೇತಿ ಶಿಬಿರವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸ್ಪರ್ಧಾ ಅಭ್ಯರ್ಥಿಗಳು ಕೇವಲ ಪುಸ್ತಕದ ಅಧ್ಯಯನಕ್ಕೆ ಮಾತ್ರ ಸೀಮಿತವಾಗದೆ ಜೀವನ ಕೌಶಲ್ಯವನ್ನು ಹೆಚ್ಚಿಸುವ ಚಟುವಟಿಕೆಗಳನ್ನು ಮೈಗೂಡಿಸಿಕೊಂಡಾಗ ಎದುರಾಗುವ ಸಮಸ್ಯೆಗಳು ಹಾಗೂ ಸವಾಲುಗಳನ್ನು ಸುಲಭವಾಗಿ ನಿಗ್ರಹಿಸಬಹುದು ಎಂದು ವಿವರಿಸಿದರು.
ಸಮಸ್ಯೆ ಬಂದಾಗ ಅದನ್ನು ಬಗೆಹರಿಸುವುದು ಹೇಗೆ ಎಂಬುದನ್ನು ಮತ್ತೊಬ್ಬರ ಬಳಿ ಮೊರೆ ಹೋಗುವ ಬದಲು ನೀವೇ ಮುಂದೆ ನಿಂತು ಅದನ್ನು ಸುಲಭವಾಗಿ ಪರಿಹರಿಸುವ ಚಾಕಚಕ್ಯತೆಯನ್ನು ಬೆಳೆಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ಇಲ್ಲಿನ ಸಂಸ್ಥೆಯು ಕೇವಲ ಬೋಧನೆಗೆ ಸೀಮಿತವಾಗದೆ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವನ್ನು ಹೆಚ್ಚಿಸುವಂತಹ ಕಾರ್ಯಾಗಾರವನ್ನು ಏರ್ಪಡಿಸಿರುವುದು ಶ್ಲಾಘನೀಯವಾಗಿದ್ದು, ಇದರಿಂದ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ಹಾಗೂ ನೈತಿಕ ಸ್ಥೆöÊರ್ಯ ವೃದ್ಧಿಯಾಗುತ್ತದೆ ಎಂದರು.