ಉಡುಪಿ ಜಿಲ್ಲೆಯ ಸೀಲ್ ಡೌನ್ ಗ್ರಾಮಗಳಲ್ಲಿ ನಾಳೆ, ನಾಡಿದ್ದು ಅಗತ್ಯ ವಸ್ತು ಖರೀದಿಗೆ ಅವಕಾಶ : ಡಿಸಿ ಜಗದೀಶ್

JANANUDI.COM NETWORK

ಉಡುಪಿ : ಕೋವಿಡ್ ವೈರಸ್ ಸೋಂಕು ಹೆಚ್ಚಿದ ಹಿನ್ನೆಲೆಯಲ್ಲಿ 50ಕ್ಕಿಂತ ಅಧಿಕ ಕೋವಿಡ್ ಪ್ರಕರಣಗಳಿರುವ ಗ್ರಾಮ ಪಂಚಾಯ್ ಗಳ ಗಡಿಗಳನ್ನು ಸೀಲ್ ಡೌನ್ ಜಾರಿ ಮಾಡಲಾಗಿದ್ದು,  ಇದೀಗ  ಸೀಲ್ ಡೌನ್ ಗ್ರಾಮಗಳಲ್ಲಿ  ಜನರಿಗೆ ಅಗತ್ಯ ಸಾಮಾನುಗಳನ್ನು ಖರೀದಿಸಲಿಕ್ಕಾಗಿ ಜೂನ್ 7 ಮತ್ತು 8 ರಂದು ಅವಕಾಶ ಕಲ್ಪಿಸಲಾಗಿದೆ  ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

    ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ 50ಕ್ಕೂ ಅಧಿಕ ಸೋಂಕಿತರಿರುವ ಸುಮಾರು 40ಕ್ಕೂ ಅಧಿಕ ಗ್ರಾಮ ಪಂಚಾಯತ್ ಗಳನ್ನು ಸೀಲ್ ಡೌನ್ ಮಾಡಲಾಗಿದೆ. ಸೀಲ್ ಡೌನ್ ಆಗಿರುವ ಗ್ರಾಮಗಳಲ್ಲಿನ ಗ್ರಾಮಸ್ಥರು ನಾಳೆ ಹಾಗೂ ನಾಡಿದ್ದು ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿ ಮಾಡಬಹುದು ಎಂದು ಆದೇಶವನ್ನು ಹೊರಡಿಸಿದ್ದಾರೆ.

ಸೀಲ್ ಡೌನ್ ಆಗಿರುವ ಗ್ರಾಮಗಳಲ್ಲಿ ಸೀಲ್ ಡೌನ್ ಆದೇಶವನ್ನು ಮುಂದುವರಿಸಬೇಕೆ ಅಥವಾ ಬೇಡವೇ ಅನ್ನುವ ಕುರಿತು ಜೂನ್ 8ರಂದು ನಿರ್ಧಾರ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.