ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಪಟ್ಟಣದ ಕೆಪಿಟಿಸಿಎಲ್ ಕಚೇರಿ ಎದುರು ಸೋಮವಾರ ಕೆಪಿಟಿಸಿಎಲ್ ನೌಕರರು ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರ ವಿದ್ಯುತ್ ಕಾಯ್ದೆಗೆ ತಂದಿರುವ ತಿದ್ದುಪಡಿಯನ್ನು ವಾಪಸ್ ಪಡೆಯಬೇಕು. ಯಾವುದೇ ಕಾರಣಕ್ಕೂ ವಿದ್ಯುತ್ ಸರಬರಾಜು ಖಾಸಗೀಕರನ ಮಾಡಬಾರದು ಎಂದು ಪ್ರತಿಭಟನ ನಿರತ ನೌಕರರು ಆಗ್ರಹಪಡಿಸಿದರು, ಕೇಂದ್ರ ಸರ್ಕಾರದ ವಿದ್ಯುತ್ ನೀತಿ ಖಂಡಿಸಿ ಆ 10 ರವರೆಗೆ ಎಲ್ಲ ನೌಕರರೂ ಪ್ರತಿಭಟನೆಯಲ್ಲಿ ಭಾಗವಹಿಸುವರು ಎಂದು ತಿಳಿಸಿದರು.
ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಮತೀರ್ಥ, ಸಹಾಯಕ ಎಂಜಿನಿಯರ್‍ಗಳಾದ ನಂಜುಂಡೇಶ್ವರ, ದೇವರಾಜ್, ವೇಣುಗೋಪಾಲ್, ಚಂದ್ರು ವಿದ್ಯುತ್ ಗುತ್ತಿಗೇದಾರರ ಸಂಘದ ಅಧ್ಯಕ್ಷ ಕೆ.ಮೋಹನಾಚಾರಿ ಇದ್ದರು