ಮಾವು ಮಾರುಕಟ್ಟೆಗೆ ಮೂಲಭೂತ ಸೌಕರ್ಯ ಒದಗಿಸಿ, ಕೊರೊನಾ ಜಾಗೃತಿ ಮೂಡಿಸಲು ತಂಡ ರಚಿಸಿ – ರೈತ ಸಂಘ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಮೇ.04: ಮಾವು ಮಾರುಕಟ್ಟೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕೊರೊನಾ ನಿಯಮಗಳನ್ನು ಪಾಲಿಸುವಂತೆ ಕರಪತ್ರಗಳ ಮೂಲಕ ಜಾಗೃತಿ ಮೂಡಿಸುವ ಜೊತೆಗೆ ವಿಶೇಷ ತಂಡ ರಚನೆ ಮಾಡಿ ಸಂಕಷ್ಟದಲ್ಲಿರುವ ಮಾವು ಬೆಳೆಗಾರರ ನೆರವಿಗೆ ಜಿಲ್ಲಾಡಳಿತ ಮುಂದಾಗಬೇಕೆಂದು ರೈತ ಸಂಘದಿಂದ ತಹಶೀಲ್ದಾರ್ ಶ್ರೀನಿವಾಸ್‍ರವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.
ಮನವಿ ನೀಡಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಕೃಷಿ ಉತ್ಪನ್ನ ಮಾರುಕಟ್ಟೆ ಅಧಿಕಾರಿಗಳು ಬರುವ ಅನುಧಾನಗಳಿಗೆ ನಕಲಿ ದಾಖಲೆಗಳನ್ನು ಸೃಷ್ಠಿ ಮಾಡಿ ಲೂಟಿ ಮಾಡುವುದರಲ್ಲಿ ತಲ್ಲೀನರಾಗಿದ್ದಾರೆ. ಪ್ರತಿ ವರ್ಷ ತಮಗೆ ಇಷ್ಟ ಬಂದ ರೀತಿ ಅಂಗಡಿಗಳಿಗೆ ಪರವಾನಗಿ ನೀಡಿ ಕಾನೂನು ಉಲ್ಲಂಘನೆ ಮಾಡಿ ಆಡಳಿತ ಮಂಡಳಿಯನ್ನೇ ರದ್ದು ಮಾಡುವ ಮಟ್ಟಕ್ಕೆ ಭ್ರಷ್ಟಚಾರ ತುಂಬಿ ತುಳುಕುತ್ತಿದೆ. ಮಾವು ಸುಗ್ಗಿ ಇನ್ನೇನು ಕೆಲವೇ ದಿನಗಳಲ್ಲಿ ಪ್ರಾರಂಭವಾಗುತ್ತಿದ್ದರೂ ಮುಂಜಾಗ್ರತವಾಗಿ ಯಾವುದೇ ಸಿದ್ದತೆಗಖನ್ನು ಮಾಡಿಕೊಳ್ಳದೆ ರೈತ ವಿರೋಧಿ ದೋರಣೇ ಅನುಸರಿಸುತ್ತಿರುವ ಆಡಳಿತ ಮಂಡಳಿಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ವರ್ಷ ಕೊರೊನಾದ ಮೊದಲನೇ ಅಲೆಯಲ್ಲಿ 3 ತಿಂಗಳ ಕಾಲ ಲಾಕ್‍ಡೌನ್ ಮಾಡಿದ್ದ ಸಂದರ್ಭದಲ್ಲಿಯೂ ಅಂದಿನ ಜಿಲ್ಲಾಧಿಕಾರಿಗಳಾಗಿದ್ದ ಸಿ.ಸತ್ಯಭಾಮ ಅವರು ಮಾವು ಬೆಳೆಗಾರರಿಗೆ ತೊಂದರೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಂಡು ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿದ್ದರು. ಅದೇ ರೀತಿ ಈ ಭಾರಿ 2 ನೇ ಕೋರೋನಾ ಆವಳಿ ಬೀಕರವಾಗಿರುವುದರಿಂದ ಪ್ರಾಣ ಹಾನಿಯೂ ಆಗಬಾರದು ರೈತರು ವ್ಯಾಪಾರಸ್ಥರು ದಲ್ಲಾಳರು ಆರೋಗ್ಯವೂ ಮುಖ್ಯವಾಗಿರುವುದರಿಂದ ಪಾಲಿಸಬೇಕಾದ ನಿಯಮಗಳ ಬಗ್ಗೆ ಜಾಗೃತವಹಿಸಬೇಕೆಂದು ಸಲಹೆ ನೀಡಿದರು.


ತಾಲ್ಲೂಕಾದ್ಯಕ್ಷ ತೆರ್ನಹಳ್ಳಿ ಆಂಜಿನಪ್ಪ ಮಾತನಾಡಿ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಯುವ ಮಾವು ಮಾರುಕಟ್ಟೆ ಯಾವುದೇ ಅಡೆತಡೆಯಿಲ್ಲದೆ ಈ ವರ್ಷವು ಕೊರೊನಾ ಇಲ್ಲದೆ ತಮ್ಮ ವಹಿವಾಟನ್ನು ನಿರ್ಭಯವಾಗಿ ಮಾಡಿಕೊಳ್ಳಬಹುದು ಎನ್ನುವ ನಿರೀಕ್ಷೆಯಲ್ಲಿದ್ದ ಮಾವು ಬೆಳೆಗಾರರಿಗೆ ಕೊರೊನಾ 2ನೇ ಅಲೆಯ ಆರ್ಭಟದಿಂದಾಗಿ ಸಾಕಷ್ಟು ಆತಂಕ ಮನೆ ಮಾಡಿದೆ. ವಿಶ್ವ ವಿಖ್ಯಾತ ಹೊಂದಿರುವ ಜಿಲ್ಲೆಯ ಮಾವು ದೇಶ ವಿದೇಶಗಳಿಗೆ ರಫ್ತಾಗುವ ಕಾಲ ಸಮೀಪದಲ್ಲಿದೆ. ಈ ಹಿನ್ನೆಲೆಯಲ್ಲಿ ಪ್ರತಿನಿತ್ಯ ಸಾವಿರಾರು ಮಂದಿ ಹೊರರಾಜ್ಯಗಳಿಂದಲೂ ಆಗಮಿಸುತ್ತಾರೆ. ಮಾವು ಸಹ 250-300 ಲಾರಿ ಲೋಡ್ ಆಗುವುದರಿಂದ ಕಾರ್ಮಿಕರು, ಮಂಡಿ ಮಾಲೀಕರು, ರೈತರ ರಕ್ಷಣೆಗೆ ಆದ್ಯತೆ ನೀಡಬೇಕಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಎಲ್ಲ ನಿಯಮಗಳನ್ನು ಪಾಲಿಸುವ ಜೊತೆಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಊಟದ ವ್ಯವಸ್ಥೆ ಸೇರಿದಂತೆ ಎಲ್ಲವೂ ವ್ಯವಸ್ಥಿತವಾಗಿ ಕಲ್ಪಿಸಬೇಕು. ಕಳೆದ ಬಾರಿ ಯಾವುದೇ ಅವಘಡಗಳು ಸಂಭವಿಸದಂತೆ ಜಿಲ್ಲಾಡಳಿತದಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಈ ಬಾರಿ ಕೊರೊನಾ 2ನೇ ಅಲೆಯು ಸಾಕಷ್ಟು ಪರಿಣಾಮಕಾರಿಯಾಗಿರುವುದರಿಂದಾಗಿ ಮಾವು ಮಾರುಕಟ್ಟೆಯಲ್ಲಿ ಹೆಚ್ಚಿನ ಕ್ರಮಕೈಗೊಳ್ಳಬೇಕಾಗಿದೆ. ಹಾಗಾಗಿ ಕಡ್ಡಾಯವಾಗಿ ಕೊರೊನಾ ನಿಯಮಗಳನ್ನು ಪಾಲಿಸುವಂತೆ ಕರಪತ್ರಗಳ ಮೂಲಕ ಜಾಗೃತಿ ಮೂಡಿಸುವ ಜೊತೆಗೆ ವಿಶೇಷ ತಂಡ ರಚನೆ ಮಾಡಿ ಸಂಕಷ್ಟದಲ್ಲಿರುವ ಮಾವು ಬೆಳೆಗಾರರ ನೆರವಿಗೆ ಜಿಲ್ಲಾಡಳಿತ ಮುಂದಾಗಬೇಕೆಂದು ಮಾನ್ಯರನ್ನು ಒತ್ತಾಯಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಶ್ರೀನಿವಾಸ್ ರವರು ಮಾವು ಮಾರುಕಟ್ಟೆಗೆ ಅನುಕೂಲವಾಗುವ ರೀತಿ ಎಲ್ಲಾ ಅಧಿಕಾರಿಗಳ ಸಭೆ ಕರೆದು ಜಾಗೃತಿ ಮೂಡಿಸುವ ಜೊತೆಗೆ ರೈತರಿಗೆ , ವ್ಯಾಪಾರಸ್ಥರು, ದಲ್ಲಾಳಿರಿಗೆ ತೊಂದರೆಯಾಗಂದಂತೆ ಕ್ರಮ ವಹಿಸುವ ಭರವಸೆ ನೀಡಿದರು.
ಮನವಿ ನೀಡುವಾಗ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ಆಂಚಂಪಲ್ಲಿ ಗಂಗಾಧರ್, ಲೋಕೇಶ್, ಸಹದೇವಣ್ಣ, ತೂಪಲ್ಲಿ ಮಾರಪ್ಪ ಮೊದಲಾದವರು ಇದ್ದರು