ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಲಾಗಿದೆ ಎಂದು ಮಾಸ್ತೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಂಗವಾದಿ ರವಿಕುಮಾರ್ ಹೇಳಿದರು.
ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗೌಡಹಳ್ಳಿ ಹಾಗೂ ಬಿಸನಹಳ್ಳಿ ಗ್ರಾಮಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿ, ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಮುಂಜಾಗ್ರತೆ ವಹಿಸಿದ ಪರಿಣಾಮವಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮಸ್ಯೆ ಅಷ್ಟಾಗಿ ಕಾಡುತ್ತಿಲ್ಲ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಿನ್ನಪ್ಪ, ಕಾರ್ಯದರ್ಶಿ ಶ್ರೀನಿವಾಸರೆಡ್ಡಿ, ಮುಖಂಡರಾದ ಬಂಗವಾದಿ ನಾಗರಾಜ್, ವೆಂಕಟರಾಮಪ್ಪ, ವೆಂಕಟಾಚಲಪತಿ, ಬೈಚಪ್ಪ, ಬೂರಗನಹಳ್ಳಿ ವೆಂಕಟಾಚಲಪತಿ, ಮುನಿರಾಜು, ಗಿರೀಶ್, ವೆಂಕಟರಾಮಪ್ಪ ಇದ್ದರು.