


ಶ್ರೀನಿವಾಸಪುರ, ಮೇ 12: ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ನಗರಾಭಿವೃದ್ಧಿ ಕೋಶದ ಘನ ತ್ಯಾಜ್ಯ ನಿರ್ವಹಣೆ ಜಿಲ್ಲಾ ನೋಡಲ್ ಅಧಿಕಾರಿ ನವೀನ್ ಚಂದ್ರ ಹಾಗೂ ಎಸ್ಡಬ್ಲ್ಯೂಎಂ ತಜ್ಞ ಹರ್ಷ ಅವರು ಘನ ತ್ಯಾಜ್ಯ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಈ ವೇಳೆ ಮನೆಮನೆಗಳಲ್ಲಿ ತ್ಯಾಜ್ಯವನ್ನು ಮೂಲದಲ್ಲೇ ಹಸಿ, ಒಣ, ಸ್ಯಾನಿಟರಿ ಹಾಗೂ ಅಪಾಯಕಾರಿ ತ್ಯಾಜ್ಯವಾಗಿ ವಿಂಗಡಣೆ ಮಾಡುವುದು, ಸಂಗ್ರಹಣೆ, ಸಾಕಾಣಿಕೆ ಹಾಗೂ ವೈಜ್ಞಾನಿಕ ವಿಲೇವಾರಿ ಮಾಡುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಜೊತೆಗೆ ಸ್ವಚ್ಛ ಸರ್ವೇಕ್ಷಣ್ 2026-27 ಹಿನ್ನೆಲೆಯಲ್ಲಿ ಸಾರ್ವಜನಿಕರು ಪುರಸಭೆಯೊಂದಿಗೆ ಸಹಕರಿಸಿ ಪಟ್ಟಣವನ್ನು ಸ್ವಚ್ಛವಾಗಿಡುವಂತೆ ಮನವಿ ಮಾಡಿದರು.
ಪರಿಶೀಲನಾ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕ ವಿಜಯ್ ಕುಮಾರ್, ಕಿರಿಯ ಆರೋಗ್ಯ ನಿರೀಕ್ಷಕ ಟಿ.ವಿ. ಸುರೇಶ್ ಹಾಗೂ ಪುರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.

