

ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ವಿವಿಧ ಕ್ಷೇತ್ರ ಕ್ರೀಡೆ( ಫೀಲ್ಡ್ ಇವೆಂಟ್) ಗಳಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಶೆರಿಲ್ ಡಿಸೋಜಾ ಇವರು ಶಾಟ್ ಪುಟ್ ತ್ರೋ ನಲ್ಲಿ, ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಶ್ರಾವ್ಯ ಜ್ಯಾವೆಲಿನ್ ತ್ರೋನಲ್ಲಿ ಹಾಗೂ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ಸಂಹಿತಾ. ಕೆ. ಶೆಟ್ಟಿ ಹ್ಯಾಮರ್ ತ್ರೋ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈ ಮೂವರು ಕ್ರೀಡಾ ಸಾಧಕ ವಿದ್ಯಾರ್ಥಿನಿಯರನ್ನು ಕಾಲೇಜಿನ ಸಂಚಾಲಕರಾದ ಶ್ರೀ ಬಿ. ಎಮ್. ಸುಕುಮಾರ್ ಶೆಟ್ಟಿಯವರು, ಪ್ರಾಂಶುಪಾಲರಾದ ನವೀನ್ ಕುಮಾರ ಶೆಟ್ಟಿ ಹಾಗೂ ಬೋಧಕ, ಬೋಧಕೇತರ ಸಿಬ್ಬಂಧಿಯವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.


