JANANUDI.COM NETWORK

ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಛಾಯಾಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಮಹಾನಾಯಕದ್ವಯರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ ಕುಮಾರ ಶೆಟ್ಟಿಯವರು ಗಾಂಧೀಜಿ-ಶಾಸ್ತ್ರೀಜಿಯವರ ಸರಳ ತತ್ವಾದರ್ಶ, ದೇಶಪ್ರೇಮದ ಕಾರ್ಯಗಳನ್ನು ಉಲ್ಲೇಖಿಸಿ ಗಾಂಧೀಜಿ ಮತ್ತು ಶಾಸ್ತ್ರೀಜಿಯವರು ಸದಾಸ್ಮರಣೀಯರೆಂದು ತಿಳಿಸಿದರು.
ಸಮಾರಂಭದಲ್ಲಿ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.