JANANUDI.COM NETWORK
ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕ
ಮುಂಬೈ- ಭಾರತ ತಂಡದ ಮಾಜಿ ನಾಯಕ, ಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್ ಅವರು ತಂಡದ ಹೆಡ್ ಕೋಚ್ ಆಗಿ ಬುಧವಾರ ನಡೆದ ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿ ಸಭೆಯಲ್ಲಿ ಅವರನ್ನು ಭಾರತ ತಂಡದ ಮುಖ್ಯ ಕೋಚ್ ಆಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಅವರು ಮುಂಬರುವ ನವೆಂಬರ್ 17 ರಿಂದ ನ್ಯೂಜಿಲೆಂಡ್ ವಿರುದ್ದದ ಸರಣಿಯಿಂದ ತಂಡದ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ತಂಡದ ಹೆಡ್ ಕೋಚ್ ಆಗಿರುವ ರವಿ ಶಾಸ್ತ್ರಿ ಅವರು ಟಿ20 ವಿಶ್ವಕಪ್ ಬಳಿಕ ತಮ್ಮ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಹೆಡ್ ಕೋಚ್ ಮತ್ತು ಇತರೆ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಿತ್ತು. ಹಾಗಾಗಿ ನ್ಯಾಷನಲ್ ಕ್ರಿಕೆಟ್ ಅಕಾಡೆಮಿ (NCA) ಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಹುಲ್ ದ್ರಾವಿಡ್ ಅವರನ್ನು ಕೇಳಿಕೊಳ್ಳಲಾಗಿತ್ತು, ಅದ್ರಂತೆ ಹೆಡ್ ಕೋಚ್ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದರು.
ಈ ಕುರಿತು ಮಾತನಾಡಿರುವ ಬಿಸಿಸಿಐನ ಗೌರವ ಕಾರ್ಯದರ್ಶಿ ಜಯ್ ಶಾ, ರಾಹುಲ್ ದ್ರಾವಿಡ್ ಕಿಂತಹ ಉತ್ತಮ ವ್ಯಕ್ತಿ ಇಲ್ಲ. ಅವರು ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿರುವುದು ಸಂತೋಷವಾಗಿದೆ. ಮುಂದಿನ ಎರಡು ವರ್ಷಗಳಲ್ಲಿ ಎರಡು ವಿಶ್ವಕಪ್ಗಳು ನಡೆಯಲಿದ್ದು, ಇದಕ್ಕಾಗಿ ಉತ್ತಮ ತಂಡವನ್ನು ರೂಪಿಸಬೇಕಿದೆ. ಇದಕ್ಕೆ ರಾಹುಲ್ ದ್ರಾವಿಡ್ ಸೂಕ್ತ ವ್ಯಕ್ತಿ ಇನ್ನಿಲ್ಲ. ಅವರ ಸಾರಥ್ಯದಲ್ಲಿ ಭಾರತ ತಂಡವು ಎಲ್ಲಾ ಮಾದರಿಗಳಲ್ಲಿ ಪ್ರಾಬಲ್ಯ ಸಾಧಿಸುವುದರಲ್ಲಿ ನನಗೆ ಯಾವುದೇ ಸಂದೇಹವಿಲ್ಲ. ಮಂಡಳಿಯು ಶೀಘ್ರದಲ್ಲೇ ಇತರ ಕೋಚಿಂಗ್ ಸಿಬ್ಬಂದಿಯ ನೇಮಕಾತಿಗಳನ್ನು ಮಾಡಲಿದೆ” ಎಂದು ಅವರು ತಿಳಿಸಿದ್ದಾರೆ