JANANUDI.COM NETWORK
ಬೆಂಗಳೂರು,ಮೇ.29: ರಾಜ್ಯದ ಹಲವೆಡೆ ಜೂನ್ ಎರಡವರೆಗೂ ಭಾರಿ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಈ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ನಿರಂತರವಾಗಿ ಮಳೆಯಾಗಲಿದೆ’ ಎಂದು ಹವಮಾನ ಇಲಾಖೆ ತಿಳಿಸಿದೆ.
ಯಾಸ್ ಚಂಡ ಮಾರುತದಿಂದ ಪಶ್ಚಿಮ ಬಂಗಾಳ ಮತ್ತು ಒಡಿಶಾ ಕರಾವಳಿ ಪ್ರದೇಶದಲ್ಲಿ ಮಾನ್ಸೂನ್ ಗಾಳಿಯ ತೀವ್ರತೆ ಹೆಚ್ಚಾಗಿದ್ದು. ಕೇರಳದಲ್ಲಿ ಜುನ್ 31 ರ ಹಾಗೆ ಮಾನ್ಸೂನ್ ಪ್ರವೇಶಿಸಲಿದ್ದು, ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಕರ್ನಾಟಕ ಕರಾವಳಿಯಲ್ಲಿ ಜೂನ್ 7 ರ ಹಾಗೆ ಮಳೆಗಾಲವು ಆರಂಭವಾಗಬಹುದೆಂದು ಕೇಂದ್ರ ಹವಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಮುಂಗಾರು ಮಳೆ ಹೊತ್ತುತರುವ ನೈಋುತ್ಯ ಮಾನ್ಸೂನ್ ಮಾರುತಗಳು. ಇತ್ತೀಚೆಗೆ ಸೃಷ್ಟಿಯಾದ 2 ಚಂಡಮಾರುತಗಳೇ ಮಾನ್ಸೂನ್ ಮಾರುತಗಳ ಈ ಚಲನೆಗೆ ಕಾರಣ ಎನ್ನಲಾಗಿದ್ದು ಕ್ಲಪ್ತ ಸಮಯಕ್ಕೆ ಮಾನ್ಸುನ್ ಆರಂಭವಾಗುವ ಲಕ್ಷಣಗಳು ಗೋಛರಿಸುತ್ತವೆ.