ಶ್ರೀನಿವಾಸಪುರ : ತಾಲೂಕಿನ ದಳಸನೂರು ಗ್ರಾಮದಲ್ಲಿ ಶುಕ್ರವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಮಿತಿಯಿಂದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಮಿತಿಯಿಂದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ
ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಯಾವುದೇ ಸರ್ಕಾರಕ್ಕೂ ಸಿದ್ಧಾಂತಗಳಿಲ್ಲ, ಜನಪರ ಕೆಲಸಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ, ರೈತರ ನೆರವಿಗೆ ಬರುತ್ತಿಲ್ಲ, ಕೇವಲ ಅಧಿಕಾರ ದಾಹಕ್ಕಾಗಿ ಏನೆಲ್ಲಾ ಮಾಡಬೇಕು ಅದನ್ನು ಮಾಡುತ್ತಿರುವುದು ಬಿಟ್ಟರೆ ಯಾವುದೇ ಅಭಿವೃದ್ಧಿ ಕೆಲಸಗಳು ರಾಜ್ಯದಲ್ಲಿ ನಡೆಯುತ್ತಿಲ್ಲ, ಮುಖ್ಯವಾಗಿ ರೈತರಿಗೆ ಬೆಂಬಲ ಬೆಲೆ ಘೋಷಿಸುವ ಮತ್ತು ಕೃಷಿ ಕಾಯ್ದೆಯನ್ನು ತಿದ್ದುಪಡಿ ಮಾಡುವ, ಬರ ಪರಿಹಾರ ನೀಡುವ ಯಾವುದೇ ಆಲೋಚನೆ ಇದ್ದಂತಿಲ್ಲ.
ಒಬ್ಬರು ಚೊಂಬು ತೋರಿಸುತ್ತಿದ್ದಾರೆ, ಇನ್ನೊಬ್ಬರು ಪೆನ್ ಡ್ರೈವ್ ತೋರಿಸಿಕೊಂಡು ಮಾನ ಮರ್ಯಾದೆ ಇಲ್ಲದೆ ಓಡಾಡುತ್ತಿದ್ದಾರೆ, ಈ ಮಾನಗೆಟ್ಟ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ನೆರವಿಗೆ ನಿಲ್ಲುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ, ಭಾರತದಲ್ಲಿರುವ ಶೇಕಡ 65 ರಷ್ಟು ರೈತರು ಮುಂದಿನ 10 ವರ್ಷಗಳಲ್ಲಿ ಶೇಕಡ 35ರಷ್ಟು ಇಳಿಕೆಯಾಗುವ ಪರಿಸ್ಥಿತಿ ಭಾರತದಲ್ಲಿ ಕಾಣುತ್ತೇವೆ ಎಂದು ವಿμÁದ ವ್ಯಕ್ತಪಡಿಸಿದರು.
ಸಭೆಯಲ್ಲಿ ರಾಜ್ಯ ಸಮಿತಿಯ ವೀರಭದ್ರಸ್ವಾಮಿ.
ಕೋಲಾರ ಜಿಲ್ಲಾ ಅಧ್ಯಕ್ಷರಾದ ರಾಮೇಗೌಡ.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ.
ಜಿಲ್ಲಾ ಉಪಾಧ್ಯಕ್ಷ ಬೈರಾರೆಡ್ಡಿ.
ಶ್ರೀನಿವಾಸಪುರ ತಾಲೂಕು ಅಧ್ಯಕ್ಷ ಶ್ರೀರಾಮ ರೆಡ್ಡಿ.
ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ರೈತ ಸಂಘದ ಸದಸ್ಯರು ಭಾಗವಹಿಸಿದ್ದರು.