ಶ್ರೀನಿವಾಸಪುರ, ವಿದ್ಯಾರ್ಥಿಗಳು ಪೋಷಕರು ಹಾಗೂ ಶಿಕ್ಷಕರ ಶ್ರಮಕ್ಕೆ ಗೌರವ ತರಬೇಕು : ಶಾಸಕ ಕೆ.ಆರ್.ರಮೇಶ್ ಕುಮಾರ್

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ತಾಲ್ಲೂಕಿನ ರಾಯಲ್ಪಾಡ್ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕೋಲಾರದ ರೋಟರಿ ಸಂಸ್ಥೆ ಹಾಗೂ ಪಬ್ಲಿಕ್ ಟಿವಿ ಸಹಯೋಗದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಟ್ಯಾಬ್ ಹಾಗೂ ಶಾಲೆಗಳಿಗೆ ಟಿವಿ ವಿತರಿಸಿ ಮಾತನಾಡಿ, ಪೋಷಕರು ಖಾಸಗಿ ಶಾಲೆಗಳ ಮೋಹ ತೊರೆದು, ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು ಎಂದು ಹೇಳಿದರು.
ತಾಲ್ಲೂಕಿನ ಎಲ್ಲ ಶಾಲೆಗಳಿಗೂ ಮೂಲ ಸೌಕರ್ಯ ಕಲ್ಪಿಸಲಾಗುವುದು. ಕ್ಷೇತ್ರದ ಎಲ್ಲ ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗೆ ಟ್ಯಾಬ್ ನೀಡಲಾಗುವುದು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಮ್ಯಾಕಲ ನಾರಾಯಣಸ್ವಾಮಿ ಮಾತನಾಡಿ, ಕೊರೊನಾ ಸಂಕಷ್ಟದ ನಡುವೆ ಮಕ್ಕಳ ಶೈಕ್ಷಣಿಕ ಪ್ರಗತಿ ಕುಂಠಿತಗೊಂಡಿದೆ. ಅವರ ಕಲಿಕಾ ಸಾಮಥ್ರ್ಯ ಕುಸಿದಿದೆ. ಈ ಪರಿಸ್ಥಿತಿಯಿಂದ ಮಕ್ಕಳನ್ನು ಪಾರುಮಾಡುವ ಉದ್ದೇಶದಿಂದ ಪಠ್ಯ ವಿಷಯ ಒಳಗೊಂಡ ಟ್ಯಾಬ್ ಹಾಗೂ ಕಲಿಕೆಗೆ ಪೂರಕವಾದ ಟಿವಿ ವಿತರಿಸಲಾಗುತ್ತಿದೆ ಎಂದು ಹೇಳಿದರು.
ರೋಟರಿ ಸಂಸ್ಥೆಯ ಗುರುನಾಗೇಶ್, ಸುಧಾಕರ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಆರ್.ವಿ.ನರೇಶ್, ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ, ಪ್ರಾಂಶುಪಾಲ ರವೀಂದ್ರ, ಗ್ರಾಮ ಪಂಚಾಯಿತಿ ಸದಸ್ಯರಾದ ಗಂಗಾಧರ್, ಅಶೋಕ್, ನರಸಿಂಹಪ್ಪ. ಮುಖಂಡರಾದ ಕೃಷ್ಣಮೂರ್ತಿ, ರಾಮಸ್ವಾಮಿ, ಶ್ರೀನಿವಾಸ್, ರಾಮಚಂದ್ರೇಗೌಡ, ಕೆ.ಕೆ.ಮಂಜು ಇದ್ದರು
.