

ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮು೦ದಿನ ಕೆಲವು ದಿನಗಳ ಕಾಲ ವ್ಯಾಪಕ ಹಾಗೂ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿ೦ದ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಮರಿಕೆ ವಹಿಸುವಂತೆ ಸೂಚಿಸಲಾಗಿದೆ.
ನದಿ, ಹೊಳೆ ಹಾಗೂ ತಗ್ಗು ಪ್ರದೇಶಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇರುವುದರಿ೦ದ ಸ್ಥಳೀಯ
ಆಡಳಿತ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.
ಮಲೆನಾಡು ಜಿಲ್ಲೆಗಳಲ್ಲೂ ಭಾರೀ ಮಳೆ
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಜುಲೈ 6ರಿ೦ದ 8ರವರೆಗೆ ಭಾರೀ
ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ವೈಪರೀತ್ಯದ ತೀವ್ರತೆಗೆ ಅನುಗುಣವಾಗಿ ಯೆಲ್ಲೋ, ಆರೆ೦ಜ್ ಹಾಗೂ ರೆಡ್ ಅಲರ್ಟ್ಗಳನ್ನು ಜಿಲ್ಲಾವಾರು ಘೋಷಿಸಲಾಗಿದೆ.

