JANANUDI NEWS NETWORK (EDITOR : BERNARD D’COSTA)
ಬೆಂಗಳೂರು: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಇಂದಿನಿಂದ ಇನ್ನೂ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆ ಆಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕರಾವಳಿ ಭಾಗದ ಜಿಲ್ಲೆಗಳಲ್ಲಿ ಈಗಾಗಲೇ ರೆಡ್ ಅಲರ್ಟ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬರದ ನಾಡು ಆಗಿದ್ದ ಉತ್ತರ ಕರ್ನಾಟಕ ಈಗ ಮಳೆನಾಡಾಗಿ ಬದಲಾಗಿದೆ. ಕರಾವಳಿ ತೀರದಲ್ಲಿ ೪೫ ಕಿ.ಮಿ. ನಿಂದ ೫೫ ಕಿ.ಮಿ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಮುಂದಿನ ೪೮ ಗಂಟೆಗಳಲ್ಲಿ ಇದರ ವೇಗ ೬೫ ಕಿ.ಮಿ. ವೇಗ ತಲುಪಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.
ಹಾಗೇ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುಂದುವರಿದಿದ್ದು, 11 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.ಮಳೆ ಮತ್ತು ಪ್ರವಾಹ ಮುಂದುವರಿದಿದ್ದು, ಹಲವೆಡೆ ಭೂಕುಸಿತವೂ ಉಂಟಾಗಿದ್ದು, ಮುಂಬೈ ಮತ್ತು ಪುಣೆ ಸೇರಿದಂತೆ ಮಹಾರಾಷ್ಟ್ರದ 11 ಜಿಲ್ಲೆಗಳಲ್ಲಿ ಇಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮಹಾರಾಷ್ಟ್ರದ ಮುಂಬೈ, ರತ್ನಗಿರಿ, ಕೊಲ್ಹಾಪುರ, ರಾಯಗಡ, ಅಮರಾವತಿ, ಸತಾರಾ, ಸಿಂಧುದುರ್ಗ ಮತ್ತು ಥಾಣೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.