ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಕೊರೊನಾದಿಂದ ಸಾವನ್ನಪ್ಪಿರುವ ವ್ಯಕ್ತಿಳ ಸಂಬಂಧಿಕರು ಪರಿಹಾರ ಧನವನ್ನು ಕುಟುಂಬದ ಕ್ಷೇಮಕ್ಕಾಗಿ ಬಳಸಬೇಕು ಎಂದು ತಹಶೀಲ್ದಾರ್ ಶರಿನ್‍ತಾಜ್ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ, ಕೊರೊನಾದಿಂದ ನಾವನ್ನಪ್ಪಿದ್ದ ವ್ಯಕ್ತಿಗಳ 38 ಕುಟುಂಬಗಳಿಗೆ ತಲಾ ರೂ.1ಲಕ್ಷ ಪರಿಹಾರ ಧನದ ಚೆಕ್ ವಿತರಿಸಿ ಮಾತನಾಡಿ, ಸರ್ಕಾರ ಮಂಜೂರು ಮಾಡಿರುವ ಹಣವನ್ನು ಮಕ್ಕಳ ಶಿಕ್ಷಣ ಹಾಗೂ ಕುಟುಂಬದ ಸಮಸ್ಯೆಗಳ ಪರಿಹಾರಕ್ಕೆ ಬಳಸಿಕೊಳ್ಳಬೇಕು ಎಂದು ಹೇಳಿದರು.
ಕೊರೊನಾ ಬಗ್ಗೆ ಹರುವ ಭಾವನೆ ಬೇಡ. ಕೊರೊನಾ ನಿಯಮ ಪಾಲನೆ ಜೀವನದ ಅವಿಭಾಜ್ಯ ಅಂಗವಾಗಬೇಕು. ವ್ಯಾದಿ ಹರಡದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬಾರದು ಎಂದು ಹೇಳಿದರು.
ಶಿರಸ್ತೇದಾರ್ ಮನೋಹರ ಮಾನೆ, ಕಂದಾಯ ನಿರೀಕ್ಷಕರಾದ ಬಿ.ವಿ.ಮುನಿರೆಡ್ಡಿ, ಗುರುಪ್ರಸಾದ್, ಜನಾರ್ಧನ್, ವಿನೋದ್, ಭಾವನ ಇದ್ದರು.