

ಕುಂದಾಪುರ: ದಸರಾ ಕ್ರೀಡಾಕೂಟ–ಸಿಎಂ ಕಪ್ 2026ರ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಕುಂದಾಪುರದ ಗುರುಕುಲ ಪಬ್ಲಿಕ್ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸಾನಿಧ್ಯ ಎಸ್. ನಾಯ್ಕ್ ಅವರು ಗಮನಾರ್ಹ ಸಾಧನೆ ಮಾಡಿದ್ದಾರೆ.
200 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಹಾಗೂ ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿ ಕ್ರೀಡಾ ಕ್ಷೇತ್ರದಲ್ಲಿ ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ.
ಸಾನಿಧ್ಯ ಅವರು ಸ್ಟೇಡಿಯಂ ರನ್ನರ್ಸ್, ಕುಂದಾಪುರದ ಸದಸ್ಯೆಯಾಗಿದ್ದು, ಶ್ರೀ ಸುಬ್ರಮಣ್ಯ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಅಥ್ಲೆಟಿಕ್ಸ್ ತರಬೇತಿ ಪಡೆಯುತ್ತಿದ್ದಾರೆ. ನಿರಂತರ ಅಭ್ಯಾಸ, ಶಿಸ್ತು ಮತ್ತು ಕಠಿಣ ಪರಿಶ್ರಮದಿಂದ ಈ ಸಾಧನೆಯನ್ನು ಮಾಡಿದ್ದಾರೆ.

