

ಕುಂದಾಪುರ: ಮೇ 27ರಂದು ಬೆಳಿಗ್ಗೆ 10ಗಂಟೆಗೆ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿಗೆ ಖ್ಯಾತ ಮನೋವೈದ್ಯ ಪದ್ಮಶ್ರೀ ಡಾ.ಸಿ.ಆರ್.ಚಂದ್ರಶೇಖರ್ ಅವರು ಆಗಮಿಸಲಿದ್ದಾರೆ. ಅವರು “ ಒತ್ತಡರಹಿತ ಜೀವನ” ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಹಿರಿಯ ವಿಶ್ವಸ್ಥಮಂಡಳಿಯ ಸದಸ್ಯರಾದ ಶಾಂತಾರಾಮ್ ಪ್ರಭು ವಹಿಸಲಿದ್ದಾರೆ. ಇನ್ನೋರ್ವ ಅತಿಥಿಗಳಾಗಿ ಲೆಕ್ಕಪರಿಶೋಧಕ ಮತ್ತು ಕಾನೂನು ಸಲಹೆಗಾರರಾದ ಡಾ.ನಾಗರಾಜ ಆಚಾರ್ ಬೆಂಗಳೂರು ಇವರು ಆಗಮಿಸಲಿದ್ದಾರೆ.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ, ಐಕ್ಯೂ.ಎಸಿ ಸಂಯೋಜಕರಾದ ಡಾ. ವಿಜಯಕುಮಾರ್ ಕೆ.ಎಮ್. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ.ಸತ್ಯನಾರಾಯಣ ಉಪಸ್ಥಿತರಿವರು. ಆಸಕ್ತ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.