ಕುಂದಾಪುರ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿ ರೇಶ್ಮಾ ಫೆರ್ನಾಂಡಿಸ್

JANANUDI.COM NETWORK


ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಕುಂದಾಪುರ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿ , ಕಾಲೇಜಿನ ಆಡಳಿತ ಮಂಡಳಿ ಉಪನ್ಯಾಸಕಿ ರೇಶ್ಮಾ ಫೆರ್ನಾಂಡಿಸ್ ಇವರನ್ನು ಆಯ್ಕೆ ಮಾಡಿದ್ದಾರೆ. ಇವರು ಶಿಕ್ಷಕರಾಗಿ, ಉಪನ್ಯಾಸಕರಾಗಿ 17 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ವಿದ್ಯಾಸಂಸ್ಥೆಯ ಸಂಚಾಲರು, ಕುಂದಾಪುರ ವಲಯದ ಪ್ರಧಾನ ಧರ್ಮ ಗುರುಗಳು ಆಗಿರುವ ವಂ.ಫಾ.ಸ್ಟ್ಯಾನಿ ತಾವ್ರೋ ಹೂ ಗುಚ್ಛ ನೀಡಿ ಪ್ರಾಂಶುಪಾಲ ಹುದ್ದೆಯನ್ನು ಹಸ್ತಾಂತರಿಸಿದರು.

ಜತೆಗೆ ಕಾಲೇಜಿನ ಉಪ ಪ್ರಾಂಶುಪಾಲರಾದ ಮಂಜುಳಾ ನಾಯರ್ ಅವರಿಗೆ ಹೂಗುಚ್ಛ ನೀಡಿ ಶುಭ ಹಾರೈಸಿದರು. ಉಪನ್ಯಾಸಕ ನಾಗರಾಜ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಬಿನು ಜಯಚಂದ್ರನ್ ವಂದಿಸಿದರು.