ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯ ನಿರ್ವಹಿಸಬೇಕು ; ಶಾಸಕ ಕೆ.ಆರ್.ರಮೇಶ್ ಕುಮಾರ್

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯ ನಿರ್ವಹಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಕಂದಾಯ ಇಲಾಖೆ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಕಂದಾಯ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿ, ಅಧಿಕಾರಿಗಳು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಸ ವಿಲೇವಾರಿಗೆ ಸೂಕ್ತವಾದ ಸ್ಥಳ ಗುರುತಿಸಿ, ಕಸ ವಿಲೇವಾರಿ ಕಾರ್ಯವನ್ನು ಶೀಘ್ರವಾಗಿ ಪ್ರಾರಂಭಿಸಬೇಕು. ಸ್ಮಶಾನ ಒತ್ತುವರಿಯನ್ನು ತೆರವುಗೊಳಿಸಿ ಸುತ್ತಲೂ ಮುಳ್ಳು ತಂತಿ ಬೇಲಿ ನಿರ್ಮಿಸಬೇಕು. ಯಾವುದೇ ಮುಲಾಜಿಲ್ಲದೆ ಕೆರೆ ಒತ್ತುವರಿನ್ನು ತೆರವುಗೊಳಿಸಬೇಕು. ಪಿ ನಂಬರ್ ತೆಗೆಯುವ ಕಾರ್ಯವನ್ನು ಬೇಗ ಮುಗಿಸಬೇಕು ಎಂದು ಹೇಳಿದರು.
ಸಮಾರಂಭದಲ್ಲಿ ಬೇರೆ ಬೇರೆ ವಿಷಯಗಳಿಗೆ ಸಂಬಂಧಿಸಿದ 450 ಅರ್ಜಿಗಳನ್ನು ಸ್ವೀಕರಿಸಲಾಯಿತು.
ಉಪ ವಿಭಾಗಾಧಿಕಾರಿ ವಿ.ಸೋಮಶೇಖರ್, ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಉಪ ತಹಶೀಲ್ದಾರ್ ಬಿ.ಆರ್.ಮುನಿವೆಂಕಟಪ್ಪ, ಚಂದ್ರಪ್ಪ, ಶಿರಸ್ತೇದಾರ್ ಮಹೋಹರ ಮಾನೆ, ಎಡಿಎಲ್‍ಆರ್ ಟಿ.ಅಶ್ವಿನಿ, ಕಂದಾಯ ನಿರೀಕ್ಷಕರಾದ ಬಿ.ವಿ.ಮುನಿರೆಡ್ಡಿ, ಬಲರಾಮಯ್ಯ, ಗುರುರಾಜರಾವ್, ಜನಾರ್ಧನ್, ವಿನೋದ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಲ್.ಕೆ.ಶ್ರೀನಿವಾಸಮೂರ್ತಿ, ಪೊಲೀಸ್ ಇನ್ಸ್‍ಪೆಕ್ಟರ್ ಸಿ.ರವಿಕುಮಾರ್, ಮುಖಂಡರಾದ ದಿಂಬಾಲ ಅಶೋಕ್, ಅಯ್ಯಪ್ಪ, ಗೊಪಾಲರೆಡ್ಡಿ, ಮುನಿವೆಂಕಟಪ್ಪ, ಎನ್.ಹನುಮೇಶ್, ಕೆ.ಕೆ.ಮಂಜು, ಸಂಜಯ್‍ರೆಡ್ಡಿ, ರಾಮಮೂರ್ತಿ ಇದ್ದರು
.