ಕೋಲಾರ : ನೌಕರರು ತಮ್ಮ ಕೆಲಸಗಳಲ್ಲಿ ಬದ್ಧತೆ ತೋರಿಸಬೇಕು. ಸಾರ್ವಜನಿಕರ ಪರವಾಗಿ ಕಾಳಜಿಯಿಂದ ಕೆಲಸ ಮಾಡಬೇಕು ರೈತರು ತಮ್ಮ ಜಮೀನುಗಳ ಮಾಹಿತಿಯನ್ನು ಫೂಟ್ಟ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಮೂಲಕ ಬರ ಪರಿಹಾರ ಹಾಗೂ ವಿಮಾ ಪರಿಹಾರಗಳಂತಹ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು.
ಈ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ರೈತರಲ್ಲಿ ಜಾಗೃತಿ ಮೂಡಿಸುವ ಮೂಲಕ ರೈತರ ಪ್ರತಿಯೊಂದು ಜಮೀನನ್ನು ಫೂಟ್ ತಂತ್ರಾಂಶದ ವ್ಯಾಪ್ತಿಗೆ ತರಬೇಕು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಸೂಚಿಸಿದರು.
ಇಂದು ಜಿಲ್ಲಾಳಿತ ಭವನದ ಸಭಾಂಗಣದಲ್ಲಿ ಜರುಗಿದ ಕಂದಾಯ ಇಲಾಖೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸರ್ಕಾರದ ಪರಿಹಾರ ಮೊತ್ತಗಳನ್ನು ರೈತರಿಗೆ ನೇರವಾಗಿ ಖಾತೆ ಜಮೆ ಮಾಡಲು ಫೂಟ್ ತಂತ್ರಾಂಶ ಬಳಸಲಾಗುತ್ತಿದೆ.
ರೈತರೆಲ್ಲರೂ ತಮ್ಮ ಜಮೀನಿನ ನಿಖರವಾದ ಮಾಹಿತಿಯನ್ನು ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಮೂಲಕ ಪರಿಹಾರ ಪಡೆದುಕೊಳ್ಳಬೆಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ರೈತರಿಗೆ ಮಾಹಿತಿ ಒದಗಿಸಬೇಕು. ಜಿಲ್ಲೆಯಲ್ಲಿ ಫೂಟ್ ತಂತ್ರಾಂಶದಲ್ಲಿ ಈಗಾಗಲೇ ನೋಂದಣಿ ಮಾಡಲಾಗಿದ್ದು. ಬಾಕಿ ಉಳಿದ ರೈತರು ನೋಂದಣಿ ಕಾರ್ಯವನ್ನು ಈ ತಿಂಗಳ ಅಂತ್ಯದೊಳಗಾಗಿ ಪೂರ್ಣಗೊಳಿಸಬೇಕು ಎಂದರು.
ಜಿಲ್ಲೆಯಲ್ಲಿ ಬರ ಆವರಿಸುತ್ತಿರುವ ಹಿನ್ನಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವಿನ ಕೊರತೆಯಾಗದಂತೆ ಮುಂಜಾಗೃತೆ ಕ್ರಮಗಳನ್ನು ಅಧಿಕಾರಿಗಳು ತೆಗೆದುಕೊಳ್ಳಬೇಕು. ಮೇವಿನ ಕೊರತೆ ಇದ್ದಲ್ಲಿ ಅಗತ್ಯಕ್ಕನುಸಾರ ಮೇವನ್ನು ಖರೀದಿ ಮಾಡಿಕೊಳ್ಳುವಂತೆ ಸೂಚಿಸಿದರು.
ನೀರಿನ ವ್ಯವಸ್ಥೆ ಇರುವೆಡೆ ರೈತರಿಗೆ ಮೇವಿನ ಬೀಜದ చిటో ಗಳನ್ನು ನೀಡಲಾಗುವುದು ಅವರು ಮೇವನ್ನು ಬೆಳೆದು ತಮ್ಮ ಜಾನುವಾರುಗಳಿಗೆ ಬಳಸಿಕೊಳ್ಳಬಹುದಾಗಿದೆ. ಅಧಿಕವಾದಲ್ಲಿ ಸರ್ಕಾರಕ್ಕೆ ನಿಗದಿಪಡಿಸಿದ ದರದಲ್ಲಿ ಮಾರಾಟ ಮಾಡಬಹುದಾಗಿದೆ. ಈ ಕುರಿತು ರೈತರಲ್ಲಿ ಜಾಗೃತಿ ಮೂಡಿಸಿ ಜಿಲ್ಲೆಯಲ್ಲಿ ಮೇವಿನ ಕೊರತೆ ಆಗದಂತೆ ನಿಗಾವಹಿಸಲು ತಿಳಿಸಿದರು.
ಬಗರಹುಕುಂ ಅಡಿ ದುರ್ಬಳಕೆ ತಡೆಗಟ್ಟಲು ಮಂಜೂರಾತಿಗೆ ಡಿಜಿಟಲ್ ಸಹಿಗೆ ಅವಕಾಶ ಮಾಡಿಕೊಟ್ಟು ಡಿಜಿಟಲ್ ಸಾಗುವಳಿ ಚೀಟಿಯನ್ನು ನೀಡಲಾಗುತ್ತದೆ. ಈ ಹಿಂದೆ ನೀಡಿದ ಸಾಗುವಳಿ ಚೀಟಿ ನೀಡಿದ ನೈಜತೆಯ ಬಗ್ಗೆ ರಾಜ್ಯದಲ್ಲಿ ಲಕ್ಷಾಂತರ ಪ್ರಕಟಣಗಳು ನ್ಯಾಯಾಲಯದಲ್ಲಿವೇ. ಮುಂದಿನ ದಿನಗಳಲ್ಲಿ ಹೀಗಾಗದಂತೆ ಡಿಜಿಟಲಿಕರಣ ಮಾಡಲಾಗುತ್ತಿದೆ.
ಸರ್ಕಾರಿ ಭೂಮಿ ರಕ್ಷಣೆಗೆ బిటో ಪದ್ಧತಿ: ಸರ್ಕಾರಿ ಜಮೀನುಗಳ ರಕ್ಷಣೆಗಾಗಿ ಆಪ್ ಸಿದ್ಧಪಡಿಸಲಾಗಿದೆ. ಸರ್ಕಾರಿ ಜಮೀನುಗಳನ್ನು ಆಪ್ ಮೂಲಕ ಡಾಟಾಬೇಸನ್ನು ಸಿದ್ಧಪಡಿಸಿ ಪ್ರತಿ ಮೂರು ತಿಂಗಳಿಗೊಮ್ಮೆ ಸರ್ಕಾರಿ ಜಾಗೆಗಳ ಸ್ಥಳಕ್ಕೆ ಗ್ರಾಮ ಲೆಕ್ಕಿಗರು ಭೇಟಿ ನೀಡಿ ಭೂಮಿ ಒತ್ತುವರಿ ಆಗಿದೆಯೋ, ಇಲ್ಲವೋ ಎಂಬದನ್ನು ಪರಿಶೀಲನೆ ನಡೆಸಿ ಆಪ್ ಮೂಲಕ ಆ ಸ್ಥಳದಿಂದಲೇ ಧೃಡೀಕರಿಸಿ ವರದಿಯನ್ನು ಆಪ್ಲೋಡ ಮಾಡಬೆಕು.
ಒಂದು ವೇಳೆ ಸರಕಾರಿ ಜಮೀನು ಒತ್ತುವರಿ ಆಗಿದ್ದಲ್ಲಿ ಆಪ್ ಬಳಸಿ ಆನಲೈನ್ ಮೂಲಕವೇ ತಹಶೀಲ್ದಾರರಿಗೆ ವರದಿ ನೀಡಬೇಕು. ಈ ಪ್ರಕ್ರಿಯೆಯಿಂದ ಸರಕಾರಿ ಭೂ-ಕಬಳಿಕೆ ನಿಯಂತ್ರಣಗೊಳ್ಳಲಿದೆ ಎಂದರು.
ಸರ್ಕಾರಿ ಭೂಮಿ ರಕ್ಷಣೆಗೆ ಬೀಟ್ ಪದ್ಧತಿ: ಸರ್ಕಾರಿ ಜಮೀನುಗಳ ರಕ್ಷಣೆಗಾಗಿ ಆಪ್ ಸಿದ್ಧಪಡಿಸಲಾಗಿದ್ದು ಸರ್ಕಾರಿ ಜಮೀನುಗಳನ್ನು ಆಪ್ ಮೂಲಕ ಡಾಟಾಬೇಸನ್ನು ಸಿದ್ಧಪಡಿಸಿ ಪ್ರತಿ ಮೂರು ತಿಂಗಳಿಗೊಮ್ಮೆ ಸರ್ಕಾರಿ ಜಾಗೆಗಳ ಸ್ಥಳಕ್ಕೆ ಗ್ರಾಮ ಲೆಕ್ಕಿಗರು ಭೇಟಿ ನೀಡಿ ಭೂಮಿ ಒತ್ತುವರಿ ಆಗಿದೆಯೋ, ಇಲ್ಲವೋ ಎಂಬದುನ್ನು ಪರಿಶೀಲನೆ ನಡೆಸಿ ಆಪ್ ಮೂಲಕ ಆ ಸ್ಥಳದಿಂದಲೇ ಧೃಡೀಕರಿಸಿ ವರದಿಯನ್ನು ಆಪ್ಲೊಡ ಮಾಡಬೆಕು. ಒಂದು ವೇಳೆ ಸರಕಾರಿ ಜಮೀನು ಒತ್ತುವರಿ ಆಗಿದ್ದಲ್ಲಿ ಆಪ್ ಬಳಸಿ ಆನಲೈನ್ ಮೂಲಕವೇ ತಹಶೀಲ್ದಾರರಿಗೆ ವರದಿ ನೀಡಬೇಕು. ಈ ಪ್ರಕ್ರಿಯೆಯಿಂದ ಸರಕಾರಿ ಭೂ-ಕಬಳಿಕೆ ನಿಯಂತ್ರಣಗೊಳ್ಳಲಿದೆ ಎಂದರು.
ಇ-ಆಫೀಸ: ಕಂದಾಯ ಇಲಾಖೆ ಕೆಲಸ ಕಾರ್ಯಗಳೆಲ್ಲವೂ ಚುರುಕುಗೊಳಿಸುವ ನಿಟ್ಟಿನಲ್ಲಿ ನಿಧಾನಗತಿ ತಪ್ಪಿಸಲು ಇ-ಆಫೀಸ ವ್ಯವಸ್ಥೆ ಅಳವಡಿಸಲಾಗಿದೆ. ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಸಂಪೂರ್ಣವಾಗಿ ಬಳಸಿಕೊಳ್ಳುವ ಮೂಲಕ ಇ-ಆಫೀಸ ಮೂಲಕವೇ ಕಡತಗಳ ಚಲನೆಯಾಗಬೇಕು. ಇದರಿಂದ ವಿಳಂಭಕ್ಕೆ ವಿದಾಯ ದೊರೆಯುತ್ತದೆ. ನಮ್ಮ ಸರ್ಕಾರದ ಜನಪರ ಹಾಗೂ ಪಾರದರ್ಶಕ ಆಡಳಿತದ ಉದ್ದೇಶ ಸಾಕಾರಗೊಳ್ಳಲಿದೆ ಎಂದರು.
ದಾಖಲೆಗಳ ಡಿಜಿಟಲಿಕರಣ: ರೆಕಾಡ್ನ ರೂಂನಲ್ಲಿರುವ ದಾಖಲೆಗಳನ್ನು ಸ್ಕ್ಯಾನ್ ಮಾಡುವ ಮೂಲಕ ಶಾಶ್ವತವಾಗಿ ದಾಖಲೆಗಳನ್ನು ಉಳಿಸಲು ಡಿಜಿಟಲಿಕರಣ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ರಾಜ್ಯ ಮಟ್ಟದಲ್ಲಿ ದಾಖಲೆಗಳ ಸೂಕ್ತ ರಕ್ಷಣೆಗೆ ಉತ್ತಮ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಿ ರಕ್ಷಣೆ ಮಾಡುತ್ತೇವೆ. ಜನಸಾಮಾನ್ಯರಿಗೆ ಸಲೀಸಾಗಿ ಅವರಿಗೆ ಸಂಬಂಧಿಸಿದ ದಾಖಲೆಗಳು ಸಿಗುವಂತೆ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಂಗಳ, ಉಪವಿಭಾಗಾಧಿಕಾರಿ ಡಾ.ಮೈತ್ರಿ, ಸೇರಿದಂತೆ ಎಲ್ಲಾ ತಹಶೀಲ್ದಾರರು, ಕಂದಾಯ ನೀರಿಕ್ಷಕರು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.