

ದ್ವಿತೀಯ ಪಿ.ಯು.ಸಿ ಪರೀಕ್ಷೆ- 2 ರಲ್ಲಿ ಕುಂದಾಪುರದ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯ ಶೈಕ್ಷಣಿಕ ಸಾಧನೆಯನ್ನು ಮಾಡಿರುತ್ತಾರೆ. ವಿಜ್ಞಾನ ವಿಭಾಗದ ಸುಹಾನಿ ಎನ್. 593 ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ ಆರನೇ ಸ್ಥಾನವನ್ನು ಪಡೆದಿರುತ್ತಾರೆ. ವಾಣಿಜ್ಯ ವಿಭಾಗದ ಸುರಕ್ಷಾ 590 ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ 8ನೇ ಸ್ಥಾನವನ್ನು ಪಡೆದಿರುತ್ತಾರೆ. ವಿಜ್ಞಾನ ವಿಭಾಗದ ಆಶಿಕಾ-589, ತನುಶ್ರೀ- 589 ಅಂಕಗಳೊಂದಿಗೆ ಹತ್ತನೇ ಸ್ಥಾನವನ್ನೂ ಪಡೆದಿರುತ್ತಾರೆ. ವಿಜ್ಞಾನ ವಿಭಾಗದ ತ್ರಿಷಾ-588, ಅನ್ವಿತಾ- 588, ಸುಜನ್ ಕುಮಾರ್-587, ನಿಶಾ-587, ಶ್ರೀಲಕ್ಷ್ಮಿ-586,
ಸಾನಿಕಾ-586, ರಶ್ಮಿತಾ-584, ಸುಮಿತ್-582, ಅಂಕಗಳನ್ನು ಪಡೆದಿರುತ್ತಾರೆ ಎಂದು ಪ್ರಾಂಶುಪಾಲರ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ವಿದ್ಯಾರ್ಥಿಗಳ ಈ ಉತ್ಕೃಷ್ಟ ಸಾಧನೆಯನ್ನು ಮೆಚ್ಚಿ ಕಾಲೇಜಿನ ಸಂಚಾಲಕರಾದ ಶ್ರೀ. ಬಿ.ಎಮ್. ಸುಕುಮಾರ್ ಶೆಟ್ಟಿಯವರು, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು, ಬೋಧಕ- ಬೋಧಕೇತರ ಸಿಬ್ಬಂಧಿಗಳು ಅಭಿನಂದನೆ ಸಲ್ಲಿಸಿರುತ್ತಾರೆ.


