

ಕುಂದಾಪುರ, ಎ. 10: 23-24 ರ ಸಾಲಿನ ದ್ವಿತೀಯ ಪಿಯು ಅಂತಿಮ ಪರೀಕ್ಷೆಯಲ್ಲಿ ಕುಂದಾಪುರ ಆರ್.ಎನ್ ಶೆಟ್ಟಿ ಪಿಯು ಕಾಲೇಜು ಶೆ 99.15 % ಫಲಿತಾಂಶವನ್ನು ಪಡೆದುಕೊಂಡಿದೆ. ಪರೀಕ್ಷೆಗೆ ಕುಳಿತ 475 ವಿದ್ಯಾರ್ಥಿಗಳಲ್ಲಿ 471 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 222 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 226 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಸುಹಾನಿ ಎನ್. 588 ಅಂಕಗಳನ್ನು ಪಡೆದು ಮೊದಲ ಸ್ಥಾನ ಗಳಿಸಿದ್ದಾರೆ. ಹಾಗೂ ನಿಶಾ 587 ಅಂಕಗಳನ್ನು ಗಳಿಸಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ತ್ರಿಷಾ ಮತ್ತು ತನುಶ್ರೀ 584 ಅಂಕಗಳನ್ನು ಗಳಿಸಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಸುರಕ್ಷಾ 590 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನಿಯಾಗಿದ್ದಾರೆ. ಶ್ರೀಧನ್ಯಾ ಮತ್ತು ಮಹಿಮಾ 587 ಅಂಕಗಳನ್ನು ಗಳಿಸಿ ದ್ವಿತೀಯ ಸ್ಥಾನಿಯಾಗಿದ್ದಾರೆ. ಸಾಕ್ಷಿ 586 ಅಂಕ ಗಳಿಸಿ ತೃತೀಯ ಸ್ಥಾನ ಗಳಿಸಿದ್ದಾರೆ. ಇವರನ್ನು ಕುಂದಾಪುರ ಎಜುಕೇಶನ್ ಸೊಸೈಟಿ ಯ ಸಂಚಾಲಕರಾದ ಶ್ರೀ ಬಿ ಎಂ ಸುಕುಮಾರ ಶೆಟ್ಟಿಯವರು ಹಾಗೂ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.
ವಿಜ್ಞಾನ ವಿಭಾಗ




ವಾಣಿಜ್ಯ ವಿಭಾಗ



