ರೋಹಿತ್ ಚಕ್ರತೀರ್ಥ ಸಾರಥ್ಯದ ಪಠ್ಯ ಪರಿಷ್ಕರಣ ಸಮಿತಿ ವಜಾ: ಸರಕಾರದಿಂದ ಆದೇಶ

JANANUDI.COM NETWORK


ಬೆಂಗಳೂರು: ರೋಹಿತ್ ಚಕ್ರತೀರ್ಥ ನೇತೃತ್ವದ ಕನ್ನಡ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ಕರ್ನಾಟಕ ಸರಕಾರ ವಜಾ ಗೊಳಿಸಿ ವಿವಾದಕ್ಕೆ ತೆರೆ ಎಳೆಯಲು ಪ್ರಯತ್ನಿಸಿದ್ದಾರೆ.


ರೋಹಿತ್ ಚಕ್ರತೀರ್ಥ ಅವರ ಸಮಿತಿಯು ಶಾಲಾ ಪಠ್ಯಕ್ಕೆ ಹೆಡ್ಗೇವಾರ್ ಅವರ ಲೇಖನ, ಚಕ್ರವರ್ತಿ ಸೂಲಿಬೆಲೆ ಬರೆದಿರುವ ಲೇಖನ ಸೇರ್ಪಡೆ, ಕೆಲವು ಲೇಖಕರ ಪಾಠಗಳ ವಿಕ್ರತಿ, ಕುವೆಂಪು, ಬಸವಣ್ಣಗೆ ಪಠ್ಯಪುಸ್ತಕದಲ್ಲಿ ಅವಮಾನ ಮಾಡಿದ್ದ ಈ ಹಲವು ಕಾರಣಗಳಿಂದ ಸಾಹಿತಿ, ರಾಜಕಾರಣಿಗಳಿಂದ , ವಿಚಾರವಾದಿಗಳಿಂದ, ಇತಿಹಾಸ ತಿರುವಿಚೆಕೆ ಮಾಡಿದಕ್ಕೆ ರೋಷಿ ಹೋದ ಜನರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರೋಹಿತ್ ಚಕ್ರತೀರ್ಥ ಸಾರಥ್ಯದ ಪಠ್ಯ ಪರಿಷ್ಕರಣ ಸಮಿತಿ ವಜಾ ಸರಕಾರ ವಜಾ ಮಾಡಿದೆ.


ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಯಾವುದಾದರೂ ಆಕ್ಷೇಪಾರ್ಹ ವಿಷಯಗಳಿದ್ದಲ್ಲಿ ಅವುಗಳನ್ನು ಮತ್ತೊಮ್ಮೆ ಪರಿಷ್ಕರಿಸುವ ಮುಕ್ತ ಮನಸ್ಸನ್ನು ಸರ್ಕಾರ ಹೊಂದಿದೆ. ಈ ಹಿನ್ನೆಲೆಯಲ್ಲಿ ಬಸವಣ್ಣನವರ ವಿಷಯಕ್ಕೆ ಸಂಬಂಧಿಸಿದಂತೆ ಸೂಕ್ತವಾಗಿ ಪರಿಷ್ಕರಿಸಲು ನಿರ್ಧಾರ ಮಾಡಲಾಗಿದೆ ಎಂದು ಮುಖ್ಯ ಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.


ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆಯನ್ನು ಆಕ್ಷೇಪಾರ್ಹವಾಗಿ ವಿಕೃತಿಗೊಳಿಸಿದ ಕವನ ಬರೆದ ವ್ಯಕ್ತಿಗಳ ಬಗ್ಗೆ ಕಾನೂನಾತ್ಮಕ ತನಿಖೆ ಕ್ರಮವನ್ನು ಸರ್ಕಾರ ತೆಗೆದುಕೊಂಡಿದೆ ಎಂದು ಅವರು ತಿಳಿಸಿದರು. ಪ್ರೊ|ಬರಗೂರು ರಾಮಚಂದ್ರಪ್ಪನವರ ಅಧ್ಯಕ್ಷತೆಯ ಸಮಿತಿಯು ರಚಿಸಿದ ಕನ್ನಡ ಭಾಷ 
ಪಠ್ಯಪುಸ್ತಕಗಳಲ್ಲಿ ರಾಷ್ಟ್ರಕವಿ ಕುವೆಂಪು ಕುರಿತಾದ 7 ಪದ್ಯಗಳಿಗೆ ಸೀಮಿತವಾಗಿದ್ದನ್ನು 10 ಕ್ಕೇರಿಸಿದೆ. ನಾಡಪ್ರಭು ಕೆಂಪೇಗೌಡರ ಪಾಠ ಹೊಸದಾಗಿ ಸೇರ್ಪಡೆಗೊಳಿಸಲಾಗಿದೆ. ಇಸ್ಲಾಂ ಮತ್ತು ಕ್ರೈಸ್ತ ಧರ್ಮದ ಜೊತೆಗೆ ಹಿಂದೂ ಧರ್ಮದ ವಿಷಯಗಳನ್ನು ಸೇರ್ಪಡೆ ಮಾಡಿ ಪರಿಚಯಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.