ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ತಾಲ್ಲೂಕಿನಾಧ್ಯಂತ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಗಳಿಗೆ ರೋಟರಿ ಶ್ರೀನಿವಾಸಪುರ ಸೆಂಟ್ರಲ್ ವತಿಯಿಂದ ಖುದ್ದಾಗಿ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರಾರಂಭ ಮುನ್ನಾ ಮಾಸ್ಕ್ ಗಳನ್ನು ವಿತರಿಸಲಾಯಿತು ಎಂದು ರೋಟರಿ ಉಪ ರಾಜ್ಯಪಾಲರಾದ ಎಸ್. ಶಿವಮೂರ್ತಿ ಮತ್ತು ಮಾಧ್ಯಮ ಕಾರ್ಯದರ್ಶಿ ಎನ್. ಕೃಷ್ಣಮೂರ್ತಿ ವಿತರಿಸಿ ಶೊಭಕೋರಿದರು.
ಪಟ್ಟಣದ ಬಾಲಕಿಯರ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಮಾಸ್ಕ್ಗಳನ್ನು ವಿತರಿಸಿ ಮಾತನಾಡಿದ ಎಸ್. ಶಿವಮೂರ್ತಿ, ತಾಲ್ಲೂಕಿನಾಧ್ಯಂತ ಒಟ್ಟು 19 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2772 ವಿದ್ಯಾರ್ಥಿ/ವಿದ್ಯಾರ್ಥಿನಿಯರು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿದ್ದು, ತಾಲ್ಲೂಕಿನಲ್ಲಿರುವ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ರೋಟರಿ ಸಂಸ್ಥೆಯಿಂದ ತಲಾ ಇಬ್ಬರು ಪದಾಧಿಕಾರಿಗಳು ಖುದ್ದಾಗಿ ತೆರಳಿ ಮಾಸ್ಕ್ಗಳನ್ನು ಏಕ ಕಾಲದಲ್ಲಿ ವಿತರಿಸಿದ್ದಾರೆ. ಕೋವಿಡ್ ಇರುವುದರಿಂದ ವಿದ್ಯಾರ್ಥಿಗಳಾದ ನೀವು ಆತಂಕ ಪಡದೆ ಜಾಗ್ರತೆ ವಹಿಸಿ, ಸರ್ಕಾರದ ಕೋವಿಡ್ ನಿಯಮಗಳನ್ನು ಪಾಲಿಸಿ, ಮಾಸ್ಕ್ ಅನ್ನು ದರಿಸಿ ಸಾಮಾಜಿಕ ಅಂತರವನ್ನು ಕಾಪಾಡಿ ದೈರ್ಯದಿಂದ ಪರೀಕ್ಷೆಗಳನ್ನು ಬರೆಯಬೇಕೆಂದು ತಿಳಿಸಿ ಶುಭ ಕೋರಿದರು.