JANANUDI.COM NETWORK
ಕೀವ್: ರಷ್ಯಾ ಉಕ್ರೇನ್ ಸೇನಾ ನೆಲೆ ಹಾಗೂ ಪ್ರಮುಖ ನಗರಗಳ ಮೇಲೆ ನಡೆಸಿದ ದಾಳಿಯಲ್ಲಿ ಇದುವರೆಗೆ 137 ನಾಗರಿಕರು ಮತ್ತು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಮಾಹಿತಿ ನೀಡಿದ್ದಾರೆ.
ಯುದ್ಧ ತೀವ್ರವಾದ ಹಿನ್ನೆಲೆಯಲ್ಲಿ ತನ್ನ ನಾಗರಿಕರಿಗೆ ತಮ್ಮ ರಕ್ಷಣೇ ಮಾಡಿಕೊಳ್ಳಲು ಶಸ್ತ್ರಾಗಳನ್ನು ಒದಗಿಸಲು ತಯಾರಾಗಿದ್ದಾರೆ.
ಅವರು ಯುದ್ಧದ ಬಗ್ಗೆ ಮಾತನಾಡಿರುವ ವಿಡಿಯೋದಲ್ಲಿ, ರಷ್ಯಾವು ಸೇನಾ ನೆಲೆಗಳ ಮೇಲೆ ಮಾತ್ರವಲ್ಲದೇ ಜನರ ಮೇಲೂ ದಾಳಿ ಮಾಡುತ್ತಿದೆ. ಪ್ರಮುಖ ನಗರಗಳನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದು, ಅಮಾಯಕರ ಬಲಿ ತೆಗೆದುಕೊಳ್ಳುತ್ತಿದೆ. ಈವರೆಗೆ ಸೈನಿಕರು ಸೇರಿದಂತೆ 137 ಜನರು ಹತರಾಗಿದ್ದು, ಇನ್ನೂ ನೂರಾರು ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.