ಬೆಂಗಳೂರು, ಜ ೨೨: ಎಸ್.ಎಸ್.ಎಲ್. ಸಿ. ಪರೀಕ್ಷೆಗೆ ಸಂಬಂಧಿಸಿದಂತೆ ಕಳೆದ ವರ್ಷದಂತೆ ಈ ವರ್ಷ ಕೊರೊನಾಕ್ಕಾಗಿ ಪಾಸ್ ಮಾಡುವುದಿಲ್ಲ . ಎಲ್ಲಾ ವಿದ್ಯಾರ್ಥಿಗಳು ಎಸ್.ಎಸ್.ಎಲ್. ಸಿ ಪರೀಕ್ಷೆಗೆ ಹಾಜರಾಗಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಕಳೆದ ವರ್ಷ ಕೋವಿಡ್ ಸಾಂಕ್ರಾಮಿಕ ರೋಗದಿಂದ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೆ ಉತ್ತೀರ್ಣರನ್ನಾಗಿ ಮಾಡಿದ ಪ್ರತಿಕ್ರಿಯೆ ಉಲ್ಲೇಖಿಸಿ ಸಚಿವರು, 2020-21 ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಮತ್ತು ಶಾಲೆಗಳು ತೀವ್ರವಾದ ಕೋವಿಡ್-ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ಕಳೆದ ವರ್ಷ ಸಮಸ್ಯೆ ವಿಭಿನ್ನವಾಗಿತ್ತು. ಕಳೆದ ವರ್ಷ ನೀಡಿದ್ದ ಸೌಲಭ್ಯ, ವ್ಯವಸ್ಥೆಯನ್ನೇ ಮಾಡಲಾಗುವುದಿಲ್ಲಾ , ಹಾಗೆ ಮಾಡಿದರೆ ವಿದ್ಯಾರ್ಥಿಗಳು ಓದುವುದನ್ನೇ ಮರೆತು ಬಿಡುತ್ತಾರೆ. ಇದರಿಂದ ಕೆಟ್ಟ ಪ್ರವೃತ್ತಿಯೊಂದನ್ನು ಬೆಳೆಸಿದಂತಾಗುತ್ತದೆ ಎಂದು ಅವರು ಹೇಳಿದ್ದಾರೆ.
ರಾಜ್ಯದ ಬಹುತೇಕ ಎಲ್ಲಾ ಶಾಲೆಗಳು ಶೇ. 70 ರಷ್ಟು ಪಠ್ಯಕ್ರಮವನ್ನು ಪೂರ್ಣ ಗೊಂಡಿವೆ ವಿದ್ಯಾರ್ಥಿಗಳಿಗೆ ಸಹಾಯಕವಾಗಲು ಶೇಕಡಾ 30 ರಷ್ಟು ಪಠ್ಯಕ್ರಮ ಕಡಿಮೆ ಮಾಡಲಾಗಿದೆ. ಫೆಬ್ರವರಿ ಕೊನೆಯ ವಾರದಲ್ಲಿ ಅಥವಾ ಮಾರ್ಚ್ ಮೊದಲ ವಾರದಲ್ಲಿ ಕೋವಿಡ್ ತೀವ್ರವಾಗಿ ಕಡಿಮೆಯಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ, ಆದರೆ ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ ಏಪ್ರಿಲ್ 11 ರ ಕೊನೆಯ ವಾರದಲ್ಲಿ ನಡೆಯಲಿವೆ. ಆ ಸಮಯದ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.