

ಕುಂದಾಪುರ ಸಂತ ಜೋಸೆಫ್ ಪ್ರೌಢ ಶಾಲೆಯಲ್ಲಿ ದಿನಾಂಕ 01-08-22 ರಂದು ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯನ್ನು ” ವ್ಯಸನ ಮುಕ್ತ” ದಿನಾಚರಣೆಯನ್ನಾಗಿ ಆಚರಿಸಲಾಯಿತು. ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐ ವಿ ಇವರು ಡಾ. ಮಹಾಂತ ಶಿವಯೋಗಿ ಅವರ ಕುರಿತು ಮಾಹಿತಿ ನೀಡಿದರು. ಶಿಕ್ಷಕರಾದ ಮೈಕಲ್ ಇವರು ವ್ಯಸನ ಮುಕ್ತ ಸಮಾಜ ನಿರ್ಮಾಣ ವಿಷಯದ ಕುರಿತು ಮಾತನಾಡಿ ಮಧ್ಯಪಾನ, ಮಾದಕ ದ್ರವ್ಯ ,ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿದರು. ಶಿಕ್ಷಕರಾದ ಅಶೋಕ್ ದೇವಾಡಿಗ ಇವರು ವ್ಯಸನ ಮುಕ್ತ ಸಮಾಜ ನಿರ್ಮಾಣದ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



