


ಶಿರ್ವ: ಎನ್ಎಸ್ಎಸ್ ದಿನಾಚರಣೆ “ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಶಿಸ್ತುಬದ್ಧ ಜೀವನವನ್ನು ನಡೆಸಲು ಪ್ರೇರಣೆಯಾಗಿದೆ. ತಾವು ಮಾಡುವ ಸಣ್ಣ ಕೆಲಸವೂ ಕೂಡ ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿದ್ದು ಸಮಾಜದಲ್ಲಿ ಉತ್ತಮ ನಾಗರೀಕನಾಗಲು ಸಹಕಾರಿಯಾಗಿದೆ. ಇಂದಿನ ಕಾಲದಲ್ಲಿ ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆಯ ಮೂಲಕ ನಾಯಕತ್ವವನ್ನು ಬೆಳೆಸುವ ಮಹತ್ತರ ಜವಾಬ್ದಾರಿಯನ್ನ ರಾಷ್ಟ್ರೀಯ ಸೇವಾ ಯೋಜನೆಯು ಬಹಳ ಉತ್ತನವಾಗಿ ನಿರ್ವಹಿಸಿದ್ದು ಹೆಮ್ಮೆಯ ಸಂಗತಿಯಾಗಿದೆ” ಎಂದು ಸಂತ ಸಂತ ಮೇರಿ ಪದವಿ ಪೂರ್ವ ಕಾಲೇಜು ಶಿರ್ವ ಇದರ ಸಂಚಾಲಕರು ಅತಿವಂದನೀಯ ಡಾ. ಲೆಸ್ಲಿ ಡಿಸೋಜಾ ಅವರು ಹೇಳಿದರು. ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ ದಿನದ ಅಂಗವಾಗಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡುತ್ತಿದ್ದರು. ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಡ್ವರ್ಡ್ ಲಾರ್ಸನ್ ಡಿಸೋಜಾ ಇವರು ರಾಷ್ಟ್ರೀಯ ಸೇವಾ ಯೋಜನೆಯ ಇತಿಹಾಸ ಮತ್ತು ಅದರ ಬೆಳವಣಿಗೆಯ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಎನ್ಎಸ್ಎಸ್ ದಿನದ ಅಂಗವಾಗಿ ನಡೆದ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಎನ್ಎಸ್ಎಸ್ ಯೋಜನಾಧಿಕಾರಿ ಮರಿಯಾ ಜೆಸಿಂತ ಫ಼ುರ್ಟಾಡೊ ಸ್ವಾಗತಿಸಿ. ವಿದ್ಯಾರ್ಥಿನಿ ಅನನ್ಯ ಭಟ್ ವಂದಿಸಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಶ್ರೀ ಜಯಶಂಕರ ಕೆ ಶುಭ ಹಾರೈಸಿದರು. ಘಟಕ ನಾಯಕಿ ಸಮೀಕ್ಶಾ ವೇದಿಕೆಯಲ್ಲಿದ್ದರು. ಕು ಚೈತ್ರಾ ನಿರೂಪಿಸಿದರು. ಕಾಲೇಜಿನ ಘಟಕದ ವಿದ್ಯಾರ್ಥಿಗಳು ಎನ್ಎಸ್ಎಸ್ ಘಟಕದ ಸ್ವಯಂಸೇವಕರು ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಹಾಜರಿದ್ದರು.











