ಕಾಂಗ್ರೆಸ್ ಎಸ್ಸಿಘಟಕದ ಜಿಲ್ಲಾಧ್ಯಕ್ಷ ಜಯದೇವ್ ಹುಟ್ಟುಹಬ್ಬ-ಆಟೋ ಚಾಲಕರಿಗೆ ಸಮವಸ್ತ್ರ ವಿತರಿಸಿದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಕೋಲಾರ: ಆಟೋ ಚಾಲಕರು ಸಮವಸ್ತ್ರ ಧರಿಸಿ ಶಿಸ್ತು ಕಾಪಾಡಬೇಕು, ಕಾನೂನನ್ನು ಗೌರವಿಸಬೇಕು, ಕೊರೊನಾದಿಂದ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ನಗರದ ಶ್ರೀಸತ್ಯಸಾಯಿ ಮಂದಿರದಲ್ಲಿ ಶನಿವಾರ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಕೆ.ಜಯದೇವ್‍ರ 53 ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ, ನೂರು ಆಟೋ ಚಾಲಕರಿಗೆ ಸಮವಸ್ತ್ರವಿತರಣೆಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಕೊರೊನಾ ಕಾಲದಲ್ಲಿ ಆಟೋ ಚಾಲಕರು ಸೇರಿದಂತೆ ಸಾರ್ವಜನಿಕವಾಗಿ ಕೆಲಸ ಮಾಡುತ್ತಿರುವ ಕೃಷಿ ಕೂಲಿ ಕಾರ್ಮಿಕರು ಹಾಗೂ ಚಾಲಕರು ಆರೋಗ್ಯ ಕಾಪಾಡಿಕೊಳ್ಳುವತ್ತ ಗಮನಹರಿಸಬೇಕು. ಕೊರೊನಾ ಎರಡನೇ ಹಂತದ ಅಲೆ ಬರುವ ಸೂಚನೆಗಳಿದ್ದು, ಇದನ್ನು ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಸಮರ್ಥವಾಗಿ ಹಿಮ್ಮೆಟ್ಟಿಸಬೇಕೆಂದರು.
ಬಹಳಷ್ಟು ಆಟೋಚಾಲಕರು ಶಾಲಾ ಮಕ್ಕಳನ್ನು ಬೆಳಿಗ್ಗೆ ಸಂಜೆ ಶಾಲೆಗೆ ಕರೆದೊಯ್ಡು ಮನೆಗೆ ಸೇರಿಸುವ ಜವಾಬ್ದಾರಿಯನ್ನು ಹೊತ್ತುಕೊಂಡಿರುತ್ತಾರೆ, ಪ್ರತಿ ಮಗುವು ತನ್ನ ಆಟೋ ಚಾಲಕ ಹೇಗೆ ರಸ್ತೆ ನಿಯಮಗಳನ್ನು ಪಾಲಿಸುತ್ತಿದ್ದಾರೆ ಎನ್ನುವುದನ್ನು ಗಮನಿಸುತ್ತಿರುತ್ತಾರೆ. ಅದ್ದರಿಂದ ಆಟೋ ಚಾಲಕರು ರಸ್ತೆ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವ ಮೂಲಕ ಯುವ ಪೀಳಿಗೆಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಬೇಕೆಂದು ಕಿವಿ ಮಾತು ಹೇಳಿದರು.
ಇದೇ ಸಂದರ್ಭದಲ್ಲಿ ಶ್ರೀ ಸತ್ಯಸಾಯಿ ಮಂದಿರದಲ್ಲಿ ಕೆ.ಜಯದೇವ್‍ರ ಹುಟ್ಟುಹಬ್ಬರ ಪ್ರಯುಕ್ತ ವಿಶೇಷ ಪೂಜೆಯನ್ನು ಏರ್ಪಡಿಸಲಾಗಿತ್ತು.
ನಂತರ ನಡೆದ ಸಮಾರಂಭದಲ್ಲಿ ಬೃಹತ್ ಗಾತ್ರದ ಕೇಕು ಕತ್ತರಿಸುವ ಮೂಲಕ ಕೆ.ಜಯದೇವ್ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು. ಸಾಯಿಮಂದಿರದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರು ಮಂದಿ ಆಟೋ ಚಾಲಕರಿಗೆ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಸಮವಸಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಕುಮಾರ್, ನಾಗರಾಜ್, ಗುಪ್ತ, ಕೆಜಿಎಫ್‍ನ ಜಾನ್, ವಿ.ಕೆ.ರಾಜೇಶ್, ಸಂತೋಷ್, ಕನ್ನಡ ಮಿತ್ರ ವೆಂಕಟಪ್ಪ, ಮಹಾನ್ ನಾರಾಯಣಸ್ವಾಮಿ, ಚೇತನ್‍ಬಾಬು, ಖಾದ್ರಿಪುರ ಬಾಬು, ಪ್ಯಾರೇಜಾನ್, ಇಕ್ಬಾಲ್, ಗೋಕುಲ ಮಿತ್ರಬಳಗದ ಆರ್.ಗೋಪಾಲ್, ಮುನಿವೆಂಕಟಯಾದವ್, ಮಣಿ, ಜ್ಯೂಸ್ ನಾರಾಯಣಸ್ವಾಮಿ, ಕೋಡಿಕಣ್ಣೂರು ಯಲ್ಲಪ್ಪ ಮತ್ತು ಜಯದೇವ್ ಕುಟುಂಬದವರು ಹಾಜರಿದ್ದರು.
ಕೋಲಾರ ನಗರದ ಶ್ರೀಸತ್ಯಸಾಯಿ ಮಂದಿರದಲ್ಲಿ ಗುರುವಾರ ಕಾಂಗ್ರೆಸ್ ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಕೆ.ಜಯದೇವ್ 53 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ನೂರು ಮಂದಿ ಆಟೋ ಚಾಲಕರಿಗೆ ಸಮವಸ್ತ್ರ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿದರು
.