

ಶಂಕರನಾರಾಯಣದ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ನ 10ನೇ ತರಗತಿಯ ಎಲ್ಲಾ 52 ವಿದ್ಯಾರ್ಥಿಗಳು ಉತ್ತೀರ್ಣರಾಗಿ 100 ಶೇಕಡಾ ಫಲಿತಾಂಶ ದಾಖಲಿಸಿದ್ದಾರೆ. 36 ಮಂದಿ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಮತ್ತು 16 ಮಂದಿನ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿ ಅತ್ಯುತ್ತಮ ಫಲಿತಾಂಶ ದಾಖಲಿಸಿರುತ್ತಾರೆ. ಪ್ರಣತಿ ಎಸ್ ಶೆಟ್ಟಿ 613 (98.08%) ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಿರುತ್ತಾಳೆ.ಅಭಿಜ್ಞಾ ಜೆ.ಎಸ್ 611 (97.76%) ಅಂಕ ಗಳಿಸಿ ದ್ವಿತೀಯ ಸ್ಥಾನ, ದಿಗಂತ ಕೆ.ಎಸ್ 609 (97.44%) ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿರುತ್ತಾರೆ ಎಂದು ಮುಖ್ಯೋಪಾಧ್ಯಾಯಿನಿ ಮಮತಾ ತಿಳಿಸಿರುತ್ತಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ವರ್ಗ, ಮುಖ್ಯೋಪಾಧ್ಯಾಯಿನಿ ಹಾಗೂ ಸಿಬ್ಬಂದಿ ವರ್ಗ ಶುಭ ಹಾರೈಸಿದ್ದಾರೆ.


