

ಕುಂದಾಪುರ ಸಂತ ಜೋಸೆಫರ ಪ್ರೌಢ ಶಾಲೆಯಲ್ಲಿ ಗಾಂಧೀಜಿಯಂತಿಯನ್ನು ಆಚರಿಸಲಾಯಿತು. ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐವಿ ಇವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗೈಡ್ಸ್ ವಿದ್ಯಾರ್ಥಿಗಳು ಸರ್ವಧರ್ಮ ಪ್ರಾರ್ಥನೆಯನ್ನು ನೆರವೇರಿಸಿದರು. ಗಾಂಧೀಜಿಯವರ ವಿಷಯವಾಗಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಲಾಯಿತು. ವಿಜೇತ ವಿದ್ಯಾರ್ಥಿಗಳಿಗೆ ಶಿಕ್ಷಕರಾದ ಮೈಕಲ್ ಸರ್ ಇವರು ಬಹುಮಾನ ವಿತರಿಸಿದರು. ಶಿಕ್ಷಕರಾದ ಅಶೋಕ್ ದೇವಾಡಿಗ ಇವರು ಗಾಂಧಿ ಜಯಂತಿಯ ಮಹತ್ವದ ಬಗ್ಗೆ ತಿಳಿಸಿದರು. ಕಾರ್ಯಕ್ರಮ ನಡೆಸಲು ಗೈಡ್ಸ್ ಶಿಕ್ಷಕಿ ಶ್ರೀಮತಿ ಸೆಲೀನ ಇವರು ಸಹಕರಿಸಿದರು. ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.
