ಪ್ರತಿಯೊಬ್ಬರೂ ಸಂವಿಧಾನವನ್ನು ಗೌರವಿಸಬೇಕು : ಜೆಎಂಎಫ್‍ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜ್

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಪ್ರತಿಯೊಬ್ಬರೂ ಸಂವಿಧಾನವನ್ನು ಗೌರವಿಸಬೇಕು ಜೆಎಂಎಫ್‍ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜ್ ಹೇಳಿದರು.
ಪಟ್ಟಣದ ನ್ಯಾಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸಂವಿಧಾನದ ಉತ್ತಮ ಆಶಯಗಳ ಫಲವಾಗಿ ದೇಶ ಪ್ರಗತಿ ಪಥದಲ್ಲಿ ನಡೆಯಲು ಸಾಧ್ಯವಾಗಿದೆ. ಸಮಾಜದಲ್ಲಿ ಸಾಮರಸ್ಯ ಉಳಿದಿದೆ. ಕಾನೂನನ್ನು ಗೌರವಿಸುವವರನ್ನು ಕಾನೂನು ಗೌರವಿಸುತ್ತದೆ ಎಂದು ಹೇಳಿದರು.
ಸಂವಿಧಾನ ರಚನೆಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಪಾತ್ರ ಹಿರಿದು. ಅವರ ದೂರದೃಷ್ಟಿಯ ಫಲವಾಗಿ ಇಂದಿನ ಸಂವಿಧಾನ ರಚನೆಯಾಗಿದೆ. ಎಂದು ಹೇಳಿದರು.
ಈ ಸಂದರ್ಭದಲ್ಲಿ ನೂತನ ವಕೀಲರ ಸಂಘದ ಕಚೇರಿಯನ್ನು ಉದ್ಘಾಟಿಸಲಾಯಿತು.
ಅಪರ ಸಿವಿಲ್ ನ್ಯಾಯಾಧೀಶ ನಾಗೇಶ್ ನಾಯಕ್, ವಕೀಲರ ಸಂಘದ ಅಧ್ಯಕ್ಷ ಕೆ.ಶಿವಪ್ಪ, ಉಪಾಧ್ಯಕ್ಷ ಗಂಗಿರೆಡ್ಡಿ, ಖಜಾಂಜಿ ಟಿ.ನಾರಾಯಣಸ್ವಾಮಿ, ಮಾಜಿ ಅಧ್ಯಕ್ಷ ಟಿ.ವೆಂಕಟೇಶ್, ಕಾರ್ಯದರ್ಶಿ ರೂಪ, ವಕೀಲರಾದ ಶ್ರೀನಿವಾಸಗೌಡ, ಅರ್ಚನಾ, ಮುಳೀಧರ್, ಕೆ.ವಿನಯ್ ಕುಮಾರ್, ಎಂ.ಸಿ.ಶಿವಶಂಕರ್, ಮುರಳಿ, ರಾಧಾಕೃಷ್ಣ ಇದ್ದರು.