ರಾಯಲ್ಪಾಡು 1 : ಸವಿತಾ ಮಹರ್ಷಿಗಳು ಸಮಾಜಮುಖಿಯಾಗಿ ಬೆಳೆದು ದಾರಿದೀಪವಾಗಿದ್ದಾರೆ ಇಂತಹ ಮಹಾತ್ಮರ ಜಯಂತಿಗಳನ್ನು ಆಚರಿಸುವ ಮೂಲಕ ಸರ್ಕಾರ ಇವರ ಆದರ್ಶಗಳ ಹಾದಿಯಲ್ಲಿ ನಡೆಯಲು ನಮಗೆ ಬೆಳಕು ತೋರಿಸಿದೆ ಎಂದು ತಹಶೀಲ್ದಾರ್ ಜಿ.ಎನ್.ಸುದೀಂದ್ರ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿನ ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಸವಿತಾ ಮಹರ್ಷಿ ಜಯಂತಿ ಶುಕ್ರವಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸವಿತಾ ಸಮಾಜದ ಬಂಧುಗಳು ಮಹರ್ಷಿಗಳ ಆದರ್ಶಗಳನ್ನು ತಮ್ಮ ಜೀವನದಲ್ಲಿ ಆಳವಡಿಸಿಕೊಂಡು ಮುನ್ನೆಡಯಬೇಕು ಎಂದು ಹೇಳಿದರು. ಸವಿತಾ ಸಮಾಜ ಹಿಂದುಳಿದ ಸಮಾಜವಾಗಿದ್ದು, ಸಮಾಜವು ಸಂಘಟನೆಯಿಂದ ಸರ್ಕಾರ ಸೌಲಭ್ಯಗಳನ್ನು ಬಳಸಿಕೊಂಡು ಅರ್ಥಿಕವಾಗಿ , ಸಾಮಾಜಿಕವಾಗಿ , ಶೈಕ್ಷಣಿಕವಾಗಿ ಬೆಳೆಯಬೇಕು ಎಂದು ಕರೆ ನೀಡಿದರು.
ಅತ್ಯಂತ ಶ್ರೀಮಂತ ಪರಂಪರೆ ಇರುವ ಸವಿತಾ ಸಮಾಜ ಒಗ್ಗಟ್ಟಾಗಿ ಆರ್ಥಿಕವಾಗಿ, ಸಾಮಾಜಿಕವಾಗಿ ಇತರರಿಗೆ ಆದರ್ಶ ಪಾಯರಾಗಿ ಬೆಳೆಯಬೇಕು ಎಂದು ಹೇಳಿದರು.
ರೇಷ್ಮ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಪ್ಪ, ಆರ್ಐ ಮುನಿರೆಡ್ಡಿ, ವಿಎ ಹರಿ, ತಹಶೀಲ್ದಾರ್ ಕಛೇರಿ ಸಿಬ್ಬಂದಿ ಎಚ್.ಎಸ್.ಅಭಿಷೇಕ್, ಸಮುದಾಯದ ಮುಖಂಡರಾದ ಶ್ರೀರಾಮಪ್ಪ, ನೆಲವಂಕಿ ರಾಮಚಂದ್ರಪ್ಪ, ದಿನೇಶ್, ಮಂಜುನಾಥ್, ಹರಿಕೆರೆ ಜಗನ್ನಾಥ್, ಮುನಿರಾಜು , ರಾಮಕೃಷ್ಣ, ಶಿವಕುಮಾರ್, ಗೋಪಾಲ್, ದಲಿತ ಮುಖಂಡರಾದ ಚಲ್ದಿಗಾನಹಳ್ಳಿ ಮುನಿವೆಂಕಟಪ್ಪ, ಪಾತೂರುಗಡ್ಡ ವಾಸು ಇದ್ದರು.