

ಮಂಗಳೂರು; ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆ, ಜೆಪ್ಪು ಇಲ್ಲಿ ದಿನಾಂಕ 03-06-2026, ಬುಧವಾರದಂದು ಶಾಲಾ ವಿದ್ಯಾರ್ಥಿ ನಾಯಕ ಹಾಗೂ ಉಪನಾಯಕ ಹುದ್ದೆಗಳಿಗೆ ಚುನಾವಣೆ ನಡೆಯಿತು.
6, 7, 8, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಮತವನ್ನು ಚಲಾಯಿಸಿ ವಿದ್ಯಾರ್ಥಿ ನಾಯಕರನ್ನು ಆಯ್ಕೆ ಮಾಡಿದರು. ಈ ಚುನಾವಣೆಯಲ್ಲಿ 10ನೇ ತರಗತಿಯ ಮೆಕ್ಟಿನ್ ಪ್ರೇಮ್ ಸಿಕ್ವೇರಾ ಅವರು 2026–27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ನಾಯಕನಾಗಿ ಆಯ್ಕೆಯಾಗಿದ್ದು, 9ನೇ ತರಗತಿಯ ಭುವನ್ ಅವರು ಶಾಲಾ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.
ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ನಾಯಕ ಹಾಗೂ ಉಪನಾಯಕರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ-ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು ಹಾಗೂ ಪೋಷಕರ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು. ಅವರ ನಾಯಕತ್ವದಲ್ಲಿ ಶಾಲೆಯು ಇನ್ನಷ್ಟು ಪ್ರಗತಿ ಹೊಂದಲಿ ಎಂದು ಹಾರೈಸಿ ಶುಭಾಶಯಗಳು ಕೋರಿದ್ದಾರೆ










