JANANUDI NEWS NETWORK (EDITOR : BERNARD D’COSTA)
ರಾಜ್ಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಳೆ ಹೆಚ್ಚಾಗಿರುವ ಶಾಲೆಗಳಿಗೆ ಕಳೆದ ಹಲವು ದಿನಗಳಿಂದ ರಜೆ ಘೋಷಿಸಲಾಗಿದ್ದು, ಮಂಗಳೂರಿನಲ್ಲಿ ಮತ್ತು ಉಡುಪಿ ಜಿಲೆಯಲ್ಲಿ ಇಂದು ಶಾಲೆಗಳು ತೆರೆದಿವೆ. ಈ ನಡುವೆ ಶಾಲೆಗಳಿಗೆ ರಜೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ.
ವಿದ್ಯಾರ್ಥಿಗಳು ಸುಗಮವಾಗಿ ಶಾಲೆಗೆ ಬಂದು ಹೋಗಲು ಸಾಧ್ಯವಾಗದ ಪ್ರದೇಶಗಳ ಶಾಲೆಗಳಿಗೆ ಆಯಾ ಶಾಲಾ ಮುಖ್ಯೋಪಾಧ್ಯಾಯರೇ ಅಧಿಕಾರಿಗಳ ಸಹಮತ ಪಡೆದು ರಜೆ ಘೋಷಿಸಬಹುದು ಎಂದು ಮಹತ್ತರದವಾದ ಸುತ್ತೋಲೆ ಹೊರಡಿಸಲಾಗಿದೆ.
ಹಾಗೇ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಿಂದ ಮಕ್ಕಳನ್ನು ದೂರ ಇರಿಸಬೇಕು ಎಂದು ತಿಳಿಸಲಾಗಿದ್ದು, ಅಂತಹ ಕಟ್ಟಡಗಳು ಕುಸಿದು ಬೀಳುವ ಸಾಧ್ಯತೆ ಇರುವುದರಿಂದ ಅಲ್ಲಿ ತರಗತಿಗಳನ್ನು ನಡೆಸುವುದಾಗಲಿ ಅಥವಾ ಶೌಚಾಲಯ ಬಳಸುವುದನ್ನು ನಿಲ್ಲಿಸಬೇಕು ಎಂದು ಸೂಚಿಸಲಾಗಿದೆ.
ರಾಜ್ಯಾದ್ಯಂತ ಕಳೆದ ಹಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಕರಾವಳಿಯಲ್ಲಿ ಭಾರೀ ಮಳೆಯಾಗಿದ್ದು, ಈ ಹಿನ್ನೆಲೆಯಲ್ಲಿ ಹಿಂದಿನ ದಿನಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ ಇಂದು ಮಳೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಶಾಲೆಗಳು ತೆರೆದಿವೆ.