ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ, ಲೊರೆನ್ಸಿಯನ್ ಸೆಂಟರ್ ಫಾರ್ ಎಕ್ಸಲೆನ್ಸ್ ನಿಂದ ಸ್ಪರ್ಧೆ ಆಯೋಜನೆ

JANANUDI.COM NETWORK


ಆಕರ್ಷಕ ಮಾದರಿಗಳನ್ನು ತಯಾರಿಸಿದ ವಿದ್ಯಾರ್ಥಿಗಳು ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ


“ವಿದ್ಯಾರ್ಥಿಗಳಲ್ಲಿ ಅಗಾಧವಾದ ಪ್ರತಿಭೆಗಳಿವೆ. ಅವಕಾಶ ಸಿಕ್ಕಾಗ ಅವುಗಳ ಸದ್ಬಳಕೆ ಮಾಡುವುದರ ಮೂಲಕ ಉನ್ನತವಾದ ಸಾಧನೆಯನ್ನು ಮಾಡಲು ಸಾಧ್ಯವಿದೆ .ಈ ದಿಸೆಯಲ್ಲಿ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆಯು ಉತ್ತಮ ವೇದಿಕೆಯಾಗಿದ್ದು ವಿದ್ಯಾರ್ಥಿಗಳು ಇದರಲ್ಲಿ ಉತ್ಸಾಹದಿಂದ ಪಾಲ್ಗೊಂಡಿರುವುದು ಹೆಮ್ಮೆಯ ವಿಷಯ ” ಎಂದು ಸಂತ ಲಾರೆನ್ಸ್ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ಶಿಕ್ಷಕಿ ಶ್ರೀಮತಿ ಸುನೀತಾ ಕಾಮತ್ ಹೇಳಿದರು .ಅವರು ಕಾಲೇಜಿನ ಸೆಂಟರ್ ಫಾರ್ ಎಕ್ಸಲೆನ್ಸ್ ಇದರ ವತಿಯಿಂದ ಆಯೋಜಿಸಿದ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು .ಭೌತಶಾಸ್ತ್ರ ಉಪನ್ಯಾಸಕರು ಶ್ರೀಮತಿ ಕವಿತಾ ಸ್ವಾಗತಿಸಿ ರಸಾಯನಶಾಸ್ತ್ರ ಉಪನ್ಯಾಸಕಿ ಆಲ್ವೀನಾ ಡಿಸೋಜ ವಂದಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಎಡ್ವರ್ಡ್ ಲಾರ್ಸನ್ ಡಿಸೋಜ ವಹಿಸಿದ್ದರು .ದೈಹಿಕ ಶಿಕ್ಷಣ ಉಪನ್ಯಾಸಕರಾದ ಶ್ರೀ ಜೋಸೆಫ್ ಡಿಸೋಜ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ರಚಿಸಿದ ವಿವಿಧ ಮಾದರಿಗಳನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು,ಸಹ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು
.