

ಕುಂದಾಪುರ(ಆ.9) ಕುಂದಾಪುರ ಎಜುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್. ಎಮ್. ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಧ್ಯಮ ಶಾಲೆಗಳ 10ನೆ ತರಗತಿಯ ವಿದ್ಯಾರ್ಥಿ ಶ್ರಾವ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ 2025 -26 ನೇ ಸಾಲಿನ 17ರ ವಯೋಮಾನದ ಬಾಲಕಿಯರ ಚೆಸ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸುವುದರ ಜೊತೆಗೆ ರಜ್ಯಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾಳೆ.
ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು.

