ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಕೋಲಾರ:- ಕೋಲಾರದ ನೂತನ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಭಾನುವಾರ ಮಧ್ಯಾಹ್ನ ನಿರ್ಗಮಿತ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರಿಂದ ಅಧಿಕಾರ ಸ್ವೀಕರಿಸಿದರು.
ಈವರೆಗೂ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಅವರು ಇದೀಗ ಕೋಲಾರ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡು ಆಗಮಿಸಿದ್ದು, ಭಾನುವಾರವೇ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಹಸ್ತಂತರಿಸಿದ ನಿರ್ಗಮಿತ ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಕೋಲಾರ ಜಿಲ್ಲೆಗೆ ಸ್ವಾಗತ ಕೋರಿ ಶುಭ ಹಾರೈಸಿದರು.
ಸತ್ಯಭಾಮ ಅವರನ್ನು ಸರ್ಕಾರ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿದೆ.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಸ್ನೇಹ ಅವರೂ ನೂತನ ಜಿಲ್ಲಾಧಿಕಾರಿಗಳನ್ನು ಸ್ವಾಗತಿಸಿದರು.ಈ ಸಂದರ್ಭದಲ್ಲಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶಬಾಬು ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿಯ ಹಲವಾರು ನೌಕರರು ಹಾಜರಿದ್ದರು.