ವರದಿ :ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
ಶ್ರೀನಿವಾಸಪುರ : ಆರೋಗ್ಯ ಇಲಾಖೆ ಸಿಬ್ಬಂದಿ ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸುವುದರ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಹರಡುತ್ತಿರುವ ಕೊರೊನಾ ಸೋಂಕನ್ನು ನಿಯಂತ್ರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ . ವೈ.ಎ.ನಾರಾಯಣಸ್ವಾಮಿ ಹೇಳಿದರು .
ಪಟ್ಟಣದ ಕೋವಿಡ್ ಆಸ್ಪತ್ರೆ ಹಾಗೂ ಹೊರವಲಯದಲ್ಲಿನ ಕೋವಿಡ್ ಸುರಕ್ಷಾ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿ , ಕೊರೂನಾ ಸೋಂಕು ನಿಯಂತ್ರಣ ಸರ್ಕಾರದ ಪ್ರಥಮ ಆದ್ಯತೆಯಾಗಿದೆ . ಆದ್ದರಿಂದ ಕೋವಿಡ್ ವಿರುದ್ದ ಸಲಿಕಾ ಕಾರ್ಯವನ್ನು ಇನ್ನಷ್ಟು ಚುರುಕುಗೊಳಿಸಬೇಕು ಗ್ರಾಮೀಣ ಪ್ರದೇಶದಲ್ಲಿ ಅನುಕೂಲ ಇಲ್ಲದ ಕೋವಿಡ್ ಸೋಂಕಿತರನ್ನು ಕಡ್ಡಾಯವಾಗಿ ಸಮೀಪದ ಕೊವಿಡ್ ಸುರಕ್ಷಾ ಕೇಂದ್ರಕ್ಕೆ ಸೇರಿಸಬೇಕು ಎಂದು ಸಲಹೆ ಮಾಡಿದರು.
ತಾಲ್ಲೂಕಿನಲ್ಲಿ ಈವರೆಗೆ ೪೦ ಸಾವಿರ ಜನಕ್ಕೆ ಕೊರೊನಾ ನಿರೋಧಕ ಲಸಿಕೆ ನೀಡಲಾಗಿದೆ . ಇನ್ನೂ ೧.೭೦ . ಲಕ್ಷ ಜನಕ್ಕೆ ಲಸಿಕೆ ನೀಡಬೇಕಾಗಿದೆ . ವಿಧಾನ ಪರಿಷತ್ ಸದಸ್ಯರ ನಿಧಿಯಿಂದ ತಾಲ್ಲೂಕಿನ ಕೊರೊನಾ ಪೀಡಿತರ ಬಳಕೆಗೆ ಅಗತ್ಯವಾದ ಸುಸಜ್ಜಿತ ಆಂಬುಲೆನ್ ಒದಗಿಸಲಾಗುವುದು ೭ ಘನೀಕೃತ ಆಮ್ಲಜನಕ ಪರಿಕರಗಳನ್ನು ನೀಡಲಾಗುವುದು ಎಂದು ಹೇಳಿದರು .
ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ , ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ , ತಾಲ್ಲೂಕು ವೈದ್ಯಾಧಿಕಾರಿ ಡಾ . ಎಂ.ಸಿ.ವಿಜಯ , ಆಸ್ಪತ್ರೆ ಆಡಳಿತಾಧಿಕಾರಿ ಡಾ . ಜಿ.ಎಸ್.ಶ್ರೀನಿವಾಸ್ , ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಅಶೋಕರೆಡ್ಡಿ , ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಕೆ.ಮಂಜುನಾಥರೆಡ್ಡಿ , ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ರಾಘವೇಂದ್ರ ಪ್ರಕಾಶ್ , ಪೋಲೀಸ್ ಇನ್ಸ್‌ಪೆಕ್ಟರ್ ಸಿ.ರವಿಕುಮಾರ್ , ಸಮಾಜ ಕಲಾನ ಇಲಾಖೆಯ ಸಹಾಯಕ ನಿರ್ದೇಶಕ ರಾಮೇಗೌಡ , ಡಾ . ದಿವಾಕರ್ ಹರೀಶ್ , ಫಾರ್ಮಾಸಿಸ್ಟ್ ಮಹಮದ್ ಅಲಿ , ನಾಗರಾಜ್ ಇದ್ದರು.