ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಸರ್ಕಾರ ಬಡವರನ್ನು ಕೋವಿಡ್ ಸಂಕಷ್ಟದಿಂದ ಪಾರುಮಾಡಲು ಪೂರಕವಾಗಿ ಪಡಿತರ ಪ್ರಮಾಣ ಹೆಚ್ಚಿಸಬೇಕು ಎಂದು ಕಸಬಾ ರೇಷ್ಮೆ ಬೆಳೆಗಾರರು ಹಾಗೂ ರೈತರ ಸೇವಾ ಸಹಕಾರ ಸಂಘದ ನಿರ್ದೇಶಕ ಶಬ್ಬೀರ್ ಅಹ್ಮದ್ ಮನವಿ ಮಾಡಿದ್ದಾರೆ.
ಕೊರೊನಾ ಎರಡನೇ ಅಲೆ ಜನರನ್ನು ತೀವ್ರವಾಗಿ ಕಾಡುತ್ತಿದ್ದು, ಸೋಂಕು ಹರಡುವಿಕೆ ತಡೆಯಲು ಸರ್ಕಾರ ಜನತಾ ಕಫ್ಯೂ ಜಾರಿಗೆ ತಂದಿದೆ. ಇದರಿಂದ ಕೂಲಿ ಕಾರ್ಮಿಕರ ಜೀವನ ನಿರ್ವಹಣೆ ಕಷ್ಟವಾಗಿದೆ. ಬಹಳಷ್ಟು ಮಂದಿ ಇದ್ದ ಕೆಲಸ ಬಿಟ್ಟು ಮನೆ ಸೇರಿದ್ದಾರೆ. ಅದರಿಂದ ಕುಟುಂಬದ ಮೇಲೆ ಹೆಚ್ಚಿನ ಹೊರೆ ಬಿದ್ದಂತಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸರ್ಕಾರ ನ್ಯಾಯ ಬೆಲೆ ಅಂಗಡಿಳಲ್ಲಿ ತಲಾ 7 ಕೆಜಿ ಅಕ್ಕಿ, 3 ಕೆಜಿ ಗೋದಿ ನೀಡಬೇಕು. 1 ರಿಂದ 10ನೇ ತರಗತಿ ಮಕ್ಕಳಿಗೆ ತಲಾ 5 ಕೆಜಿ ಅಕ್ಕಿ ವಿತರಣೆ ಮಾಡಬೇಕು ಎಂದು ಕೋರಿದ್ದಾರೆ.